alex Certify ಕಲ್ಯಾಣ ಕರ್ನಾಟಕ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಲ್ಯಾಣ ಕರ್ನಾಟಕ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಹೊಸಪೇಟೆ(ವಿಜಯನಗರ): ಕಕರಸಾನಿ ಹೊಸಪೇಟೆ ವಿಭಾಗದಿಂದ ವಿದ್ಯಾರ್ಥಿಗಳಿಗೆ ರಿಯಾಯಿತಿ ಬಸ್ ಪಾಸ್ ಗಳನ್ನು ಜೂ. 1 ರಿಂದ ವಿತರಿಸಲಾಗುವುದು.

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಹೊಸಪೇಟೆ ವಿಭಾಗದ ವತಿಯಿಂದ ಸೇವಾ ಸಿಂಧು ಯೋಜನೆಯ ಅಡಿಯಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹೊಸಪೇಟೆ, ಕೂಡ್ಲಿಗಿ, ಹಡಗಲಿ, ಹಗಬೊಮ್ಮನಹಳ್ಳಿ, ಕೊಟ್ಟೂರು ಹಾಗೂ ಹರಪನಹಳ್ಳಿ ತಾಲೂಕು ವ್ಯಾಪ್ತಿಯಲ್ಲಿನ ವಿದ್ಯಾರ್ಥಿಗಳಿಗೆ ರಿಯಾಯಿತಿ ದರದ ಬಸ್ ಪಾಸ್‍ಗಳನ್ನು ಜೂ. 1 ರಿಂದ ವಿತರಿಸಲು ಕ್ರಮಕೈಗೊಳ್ಳಲಾಗಿದೆ ಎಂದು ಕಕರಸಾ ನಿಗಮದ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ಎಲ್ಲಾ ವಿದ್ಯಾರ್ಥಿಗಳು ರಿಯಾಯಿತಿ ಬಸ್ ಪಾಸ್‍ಗಳ ಸದುಪಯೋಗವನ್ನು ಪಡೆದುಕೊಳ್ಳಲು ಆನ್-ಲೈನ್ ಮೂಲಕ ಅರ್ಜಿ ಸಲ್ಲಿಸಿ ಪಡೆದುಕೊಳ್ಳಬಹುದು ಎಂದು ಅವರು ತಿಳಿಸಿದ್ದಾರೆ.

ಗ್ರಾಮ ಒನ್ ಕೇಂದ್ರಗಳಲ್ಲಿ ಅರ್ಜಿ

ರಾಜ್ಯಾದಾದ್ಯಂತ ಗ್ರಾಮ ಒನ್ ಯೋಜನೆಯ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗಿದ್ದು, ಶಾಲಾ ಕಾಲೇಜು ವಿದ್ಯಾರ್ಥಿಗಳು ಬಸ್ ಪಾಸ್‍ ಗೆ ಸಂಬಂಧಿಸಿದಂತೆ ಬಸ್ ಪಾಸ್ ಸೌಲಭ್ಯವನ್ನು ಪಡೆಯಲು ಗ್ರಾಮ ಒನ್ ಕೇಂದ್ರಗಳಲ್ಲಿಯೇ ಅರ್ಜಿಯನ್ನು ಸಲ್ಲಿಸಬೇಕಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...