alex Certify ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಉಚಿತ, ರಿಯಾಯಿತಿ ಬಸ್ ಪಾಸ್ ಅವಧಿ ವಿಸ್ತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಉಚಿತ, ರಿಯಾಯಿತಿ ಬಸ್ ಪಾಸ್ ಅವಧಿ ವಿಸ್ತರಣೆ

ಬಳ್ಳಾರಿ: 2021-22 ನೇ ಸಾಲಿನಲ್ಲಿ ಪದವಿ, ವೃತ್ತಿಪರ ಕೋರ್ಸ್, ಕಾನೂನು ಹಾಗೂ ಸ್ನಾತಕೋತ್ತರ ಪದವಿಯ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಹಾಲಿ ವರ್ಷದ 2022ರ ಆಗಸ್ಟ್/ಸೆಪ್ಟೆಂಬರ್/ನವೆಂಬರ್ ಮಾಹೆವರೆಗೂ ತರಗತಿಗಳು ಹಾಗೂ ಪರೀಕ್ಷೆಗಳು ನಡೆಯುವುದರಿಂದ, ವಿದ್ಯಾರ್ಥಿಗಳಿಗೆ ಬಸ್‍ಪಾಸ್ ಅವಧಿಯನ್ನು ವಿಸ್ತರಿಸುವ ಬಗ್ಗೆ ಅಧಿಕಾರಿಗಳು ಅನುಮೋದಿಸಿರುತ್ತಾರೆ.

ಪ್ರಸ್ತುತ ಎಲ್ಲಾ ವರ್ಗದ ಪದವಿ, ವೃತ್ತಿಪರ ಕೋರ್ಸ್, ಕಾನೂನು ಹಾಗೂ ಸ್ನಾತಕೋತ್ತರ ಅಂತಿಮ ವರ್ಷದ ಪರೀಕ್ಷೆಗಳು/ತರಗತಿಗಳು ನಡೆಯುತ್ತಿರುವುದನ್ನು ಖಾತರಿಪಡಿಸಿಕೊಂಡು, ಒಂದು/ಎರಡು ತಿಂಗಳ ಅವಧಿಗೆ (ಜುಲೈ-2022/ಆಗಸ್ಟ್-2022) ನಿಗದಿತ ಮೊತ್ತವನ್ನು ಪಾವತಿಸಿ ರಶೀದಿ ಪಡೆದುಕೊಂಡು ವಿದ್ಯಾರ್ಥಿಗಳು ಪ್ರಯಾಣಿಸಬೇಕು ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ, ಬಳ್ಳಾರಿ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿಗಳು ತಿಳಿಸಿದ್ದಾರೆ.

ಬಸ್ ನಲ್ಲಿ ವಿದ್ಯಾರ್ಥಿಗಳು ಪ್ರಯಾಣಿಸುವಾಗ ಕಡ್ಡಾಯವಾಗಿ ರಶೀದಿ ಪಾವತಿ ಮತ್ತು ಹಳೆಯ ಪಾಸ್ ಎರಡನ್ನೂ ತೋರಿಸಿ ಪ್ರಯಾಣಿಸಬೇಕು ಎಂದು ಅವರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...