ಬೆಂಗಳೂರು: ವಿದ್ಯಾರ್ಥಿಗಳಲ್ಲಿ ಓದುವ ಹವ್ಯಾಸ ಬೆಳೆಸಲು ಸರ್ಕಾರ ‘ಓದುವ ಹವ್ಯಾಸ ಜ್ಞಾನದ ವಿಕಾಸ’ ಕಾರ್ಯಕ್ರಮ ಅನುಷ್ಠಾನಗೊಳಿಸುತ್ತಿದೆ. ರಾಜ್ಯದ ಎಲ್ಲಾ ಶಾಲೆಗಳಲ್ಲಿಯೂ ಮಕ್ಕಳ ಸ್ನೇಹಿ ಗ್ರಂಥಾಲಯ ಕಲ್ಪಿಸುವಂತೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.
ರಾಜ್ಯದ ಎಲ್ಲಾ ಶಾಲೆಗಳು ಮಕ್ಕಳ ಸ್ನೇಹಿ ಗ್ರಂಥಾಲಯ ಹೊಂದಬೇಕು ಮತ್ತು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ವಾರದಲ್ಲಿ ಒಂದು ಅವಧಿ ಗ್ರಂಥಾಲಯಕ್ಕೆ ಮೀಸಲಿಡಬೇಕು ಎಂದು ಶಾಲಾ ಶಿಕ್ಷಣ ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿದೆ.
ಪ್ರಸಿದ್ಧ ಲೇಖಕರ ಕಥೆ, ಕವಿತೆ, ನಾಟಕ, ಕಾದಂಬರಿ ಮೊದಲಾದ ಸಾಹಿತ್ಯ ಕೃತಿಗಳು, ಜಾನಪದ, ಲೇಖನ ಒಳಗೊಂಡ ಪುಸ್ತಕಗಳನ್ನು ಸಂಗ್ರಹಿಸಬೇಕು. ಸಮಗ್ರ ಶಿಕ್ಷಣ ಕರ್ನಾಟಕದ ನೆರವು ಹಾಗೂ ದಾನಿಗಳಿಂದ ಪುಸ್ತಕಗಳನ್ನು ಪಡೆದುಕೊಳ್ಳಬೇಕು. ಪುಸ್ತಕ ಓದುವ ಹವ್ಯಾಸವನ್ನು ಮಕ್ಕಳಲ್ಲಿ ರೂಢಿಸಬೇಕು ಎಂದು ಶಿಕ್ಷಣ ಇಲಾಖೆ ತಿಳಿಸಿದೆ.