ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಸಮೀಪ ತುಂಗಾ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.
ರಕ್ಷಿತ್(20), ಪ್ರಜ್ವಲ್(20) ಮೃತಪಟ್ಟ ವಿದ್ಯಾರ್ಥಿಗಳು. ಶುಕ್ರವಾರ ಮಧ್ಯಾಹ್ನ ಶೃಂಗೇರಿ ತಾಲೂಕಿನ ನೆಮ್ಮಾರು ಪಂಚಾಯಿತಿ ವ್ಯಾಪ್ತಿಯ ಸುಂಕದಮಕ್ಕಿ ತೂಗು ಸೇತುವೆ ಸಮೀಪ ಸ್ನೇಹಿತರೊಂದಿಗೆ ಕ್ರಿಕೆಟ್ ಆಡಿದ್ದ ನಂತರ ಈಜಲು ನದಿಗೆ ಇಳಿದಿದ್ದ ವೇಳೆ ಘಟನೆ ನಡೆದಿದೆ.
ರಕ್ಷಿತ್ ಗೆ ಈಜು ಬಾರದ ಕಾರಣ ನೀರಿನಲ್ಲಿ ಮುಳುಗುತ್ತಿರುವುದನ್ನು ಗಮನಿಸಿದ ಪ್ರಜ್ವಲ್ ರಕ್ಷಿಸಲು ಹೋಗಿದ್ದಾನೆ. ಈ ವೇಳೆ ಇಬ್ಬರೂ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.