ಬೆಂಗಳೂರು : ಖಾಸಗಿ ಶಾಲೆಯ ವಿದ್ಯಾರ್ಥಿನಿಯ ಫೋಟೋವನ್ನು ಡೀಪ್ ಫೇಕ್ ಮೂಲಕ ಅಶ್ಲೀಲವಾಗಿ ಕ್ರಿಯೇಟ್ ಮಾಡಿ ಇನ್ ಸ್ಟಾಗ್ರಾಂ ನಲ್ಲಿ ಹಂಚಿಕೊಂಡ ಪ್ರಕರಣ ಅದೇ ಶಾಲೆಯ ಇಬ್ಬರು ವಿದ್ಯಾರ್ಥಿಗಳನ್ನು ಡಿಬಾರ್ ಮಾಡಲಾಗಿದೆ.
ಮೇ 24 ರಂದು 9 ನೇ ತರಗತಿ ವಿದ್ಯಾರ್ಥಿನಿ ಫೋಟೋವನ್ನು ಅಶ್ಲೀಲವಾಗಿ ಮಾರ್ಪಿಂಗ್ ಮಾಡಿ ವಿದ್ಯಾರ್ಥಿಗಳೇ ಇರುವ ಇನ್ ಸ್ಟಾಗ್ರಾಂ ಗ್ರೂಪ್ ನಲ್ಲಿ ಹಂಚಿಕೊಳ್ಳಲಾಗಿತ್ತು. ಇದನ್ನು ನೋಡಿದ ವಿದ್ಯಾರ್ಥಿಗಳು ಶಾಕ್ ಆಗಿದ್ದರು.
ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡ ಆಡಳಿತ ಮಂಡಳಿ ಸೈಬರ್ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣದಲ್ಲಿ ಇಬ್ಬರು ವಿದ್ಯಾರ್ಥಿಗಳು ತಾವೇ ಈ ಕೃತ್ಯ ಎಸಗಿರುವುದನ್ನು ಒಪ್ಪಿಕೊಂಡಿದ್ದಾರೆ. ಈ ಹಿನ್ನೆಲೆ ಇಬ್ಬರು ಬಾಲಕರನ್ನು ಡಿಬಾರ್ ಮಾಡಲಾಗಿದೆ. ವಿದ್ಯಾರ್ಥಿಗಳು ಇಂತಹ ಕೃತ್ಯದಲ್ಲಿ ಭಾಗಿಯಾಗಿರುವುದು ನಿಜಕ್ಕೂ ಆತಂಕಕಾರಿಯಾಗಿದೆ.