
ಶಿವಮೊಗ್ಗ: ರಂಜಾನ್ ಉಪವಾಸ ಮುಗಿಸಿ ಈಜಲು ಹೋಗಿದ್ದ ಎಸ್.ಎಸ್.ಎಲ್.ಸಿ. ಓದುತ್ತಿದ್ದ ಮೂವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಸೋಮವಾರ ಸಂಜೆ ತೀರ್ಥಹಳ್ಳಿಯಲ್ಲಿ ನಡೆದಿದೆ.
ಇಯಾನ್, ಸಮ್ಮರ್, ರಫಾನ್ ಮೃತಪಟ್ಟ ವಿದ್ಯಾರ್ಥಿಗಳು ಎಂದು ಹೇಳಲಾಗಿದೆ. ಸೋಮವಾರ ಸಂಜೆ ತೀರ್ಥಹಳ್ಳಿಯ ರಾಮ ಮಂಟಪ ಸಮೀಪ ತುಂಗಾ ನದಿಯಲ್ಲಿ ಈಜಲು ಹೋದಾಗ ದುರಂತ ನಡೆದಿದೆ. ಅಗ್ನಿಶಾಮಕ ದಳ ಸಿಬ್ಬಂದಿ, ಪೋಲೀಸರು, ಸ್ಥಳೀಯರು ಸತತ ಹುಡುಕಾಟದ ಬಳಿಕ ಮೃತದೇಹಗಳನ್ನು ಹೊರ ತೆಗೆದಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.