
ಬೆಂಗಳೂರು: ಸರ್ಕಾರಿ ಮತ್ತು ಅನುದಾನಿತ ಪಾಲಿಟೆಕ್ನಿಕ್ ಗಳಲ್ಲಿ ಲ್ಯಾಟರಲ್ ಎಂಟ್ರಿ ಮೂಲಕ ಎರಡನೇ ವರ್ಷದ ಮೂರನೇ ಸೆಮಿಸ್ಟರ್ ಅರೆಕಾಲಿಕ ಡಿಪ್ಲೊಮಾ ಕೋರ್ಸುಗಳ ಪ್ರವೇಶವನ್ನು ಮೇ 10 ರವರೆಗೆ ವಿಸ್ತರಣೆ ಮಾಡಲಾಗಿದೆ.
2021 -22 ನೇ ಸಾಲಿನಲ್ಲಿ ಪ್ರಥಮ ಪಾಲಿಟೆಕ್ನಿಕ್ ಗಳಲ್ಲಿ ಲ್ಯಾಟರಲ್ ಎಂಟ್ರಿ ಮೂಲಕ ಎರಡನೇ ವರ್ಷದ ಮೂರನೇ ಸೆಮಿಸ್ಟರ್ ಅರೆಕಾಲಿಕ ಡಿಪ್ಲೊಮಾ ಕೋರ್ಸುಗಳ ಪ್ರವೇಶ ಪಡೆಯಬಹುದು.
ದ್ವಿತೀಯ ಪಿಯುಸಿ ವಿಜ್ಞಾನ, ವಾಣಿಜ್ಯ ವಿಷಯಗಳಲ್ಲಿ ಪಾಸ್ ಆಗಿರುವ ಅಭ್ಯರ್ಥಿಗಳಿಗೆ ಸರ್ಕಾರಿ ಮತ್ತು ಅನುದಾನಿತ ಪಾಲಿಟೆಕ್ನಿಕ್ ಗಳಲ್ಲಿ ಲ್ಯಾಟರಲ್ ಎಂಟ್ರಿ ಮೂಲಕ ಪ್ರವೇಶ ನೀಡಲಾಗುವುದು. ತಾಂತ್ರಿಕ ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕರು ಕಾಲೇಜುಗಳಿಗೆ ಈ ಕುರಿತಾಗಿ ಸುತ್ತೋಲೆ ಹೊರಡಿಸಿದ್ದು, ಮೇ 12 ರೊಳಗೆ ಪ್ರವೇಶ ಪ್ರಕ್ರಿಯೆ ಪೂರ್ಣಗೊಳಿಸುವಂತೆ ತಿಳಿಸಿದ್ದಾರೆ.