alex Certify ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಪಾಲಿಟೆಕ್ನಿಕ್ ಗಳಲ್ಲಿ ಪ್ರವೇಶ ಅವಧಿ ವಿಸ್ತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಪಾಲಿಟೆಕ್ನಿಕ್ ಗಳಲ್ಲಿ ಪ್ರವೇಶ ಅವಧಿ ವಿಸ್ತರಣೆ

ಬೆಂಗಳೂರು: ಸರ್ಕಾರಿ ಮತ್ತು ಅನುದಾನಿತ ಪಾಲಿಟೆಕ್ನಿಕ್ ಗಳಲ್ಲಿ ಲ್ಯಾಟರಲ್ ಎಂಟ್ರಿ ಮೂಲಕ ಎರಡನೇ ವರ್ಷದ ಮೂರನೇ ಸೆಮಿಸ್ಟರ್ ಅರೆಕಾಲಿಕ ಡಿಪ್ಲೊಮಾ ಕೋರ್ಸುಗಳ ಪ್ರವೇಶವನ್ನು ಮೇ 10 ರವರೆಗೆ ವಿಸ್ತರಣೆ ಮಾಡಲಾಗಿದೆ.

2021 -22 ನೇ ಸಾಲಿನಲ್ಲಿ ಪ್ರಥಮ ಪಾಲಿಟೆಕ್ನಿಕ್ ಗಳಲ್ಲಿ ಲ್ಯಾಟರಲ್ ಎಂಟ್ರಿ ಮೂಲಕ ಎರಡನೇ ವರ್ಷದ ಮೂರನೇ ಸೆಮಿಸ್ಟರ್ ಅರೆಕಾಲಿಕ ಡಿಪ್ಲೊಮಾ ಕೋರ್ಸುಗಳ ಪ್ರವೇಶ ಪಡೆಯಬಹುದು.

ದ್ವಿತೀಯ ಪಿಯುಸಿ ವಿಜ್ಞಾನ, ವಾಣಿಜ್ಯ ವಿಷಯಗಳಲ್ಲಿ ಪಾಸ್ ಆಗಿರುವ ಅಭ್ಯರ್ಥಿಗಳಿಗೆ ಸರ್ಕಾರಿ ಮತ್ತು ಅನುದಾನಿತ ಪಾಲಿಟೆಕ್ನಿಕ್ ಗಳಲ್ಲಿ ಲ್ಯಾಟರಲ್ ಎಂಟ್ರಿ ಮೂಲಕ ಪ್ರವೇಶ ನೀಡಲಾಗುವುದು. ತಾಂತ್ರಿಕ ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕರು ಕಾಲೇಜುಗಳಿಗೆ ಈ ಕುರಿತಾಗಿ ಸುತ್ತೋಲೆ ಹೊರಡಿಸಿದ್ದು, ಮೇ 12 ರೊಳಗೆ ಪ್ರವೇಶ ಪ್ರಕ್ರಿಯೆ ಪೂರ್ಣಗೊಳಿಸುವಂತೆ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...