alex Certify ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಅರಿವು ಯೋಜನೆಯಡಿ 5 ಲಕ್ಷ ರೂ.ವರೆಗೆ ಶೈಕ್ಷಣಿಕ ಸಾಲ ಸೌಲಭ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಅರಿವು ಯೋಜನೆಯಡಿ 5 ಲಕ್ಷ ರೂ.ವರೆಗೆ ಶೈಕ್ಷಣಿಕ ಸಾಲ ಸೌಲಭ್ಯ

ಶಿವಮೊಗ್ಗ: 2020-21 ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ಅರಿವು ಶೈಕ್ಷಣಿಕ ಸಾಲ ಯೋಜನೆಯಲ್ಲಿ ಪ್ರಗರ್ವ-2ಎ ರ ಮಡಿವಾಳ ಮತ್ತು ಅದರ ಉಪ ಜನಾಂಗಕ್ಕೆ ಸೇರಿದ ವಿದ್ಯಾರ್ಥಿಗಳು ಸಾಮಾನ್ಯ ಪ್ರವೇಶ ಪರೀಕ್ಷೆ  ಮೂಲಕ ಪ್ರವೇಶ ಪಡೆದು ವ್ಯಾಸಂಗ ಮಾಡುವ ಕೋರ್ಸ್‍ಗಳಿಗನುಗುಣವಾಗಿ ಸಾಲ ನೀಡಲಾಗುವುದು.

ವಾರ್ಷಿಕ 1 ಲಕ್ಷ ರೂ.ಗಳಂತೆ ಕೋರ್ಸ್‍ನ ಅವಧಿಗೆ ಗರಿಷ್ಠ 4 ಲಕ್ಷದಿಂದ 5 ಲಕ್ಷ ರೂ.ವರೆಗೆ ವಾರ್ಷಿಕ ಶೇ. 2 ರ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ನೀಡಲಾಗುತ್ತಿದೆ. ಬಿ.ಇ., ಎಂ.ಬಿ.ಬಿ.ಎಸ್., ಬಿ.ಯೂ.ಎಂ.ಎಸ್, ಬಿ.ಡಿ.ಎಸ್. ಬಿ.ಎ.ಎಂ.ಎಸ್., ಎಂ.ಬಿ.ಎ., ಎಂಟೆಕ್, ಎಂ.ಇ., ಎಂ.ಡಿ., ಪಿ.ಹೆಚ್.ಡಿ., ಬಿ.ಸಿ.ಎ/ಎಂಸಿಎ, ಎಂಎಸ್ ಅಗ್ರಿಕಲ್ಚರ್, ಬಿ.ಎಸ್.ಸಿ. ನರ್ಸಿಂಗ್, ಬಿ.ಫಾರ್ಮ್/ಎಂ.ಫಾರ್ಮ್,  ಬಿಎಸ್ಸಿ. ಪ್ಯಾರ ಮೆಡಿಕಲ್, ಬಿಎಸ್ಸಿ ಬಯೋ ಟೆಕ್ನಾಲಜಿ, ಬಿಟೆಕ್, ಬಿಟಿಪಿ, ಬಿ.ವಿ.ಎಸ್.ಸಿ/ಎಂ.ವಿ.ಎಸ್.ಸಿ., ಜಿ.ಎನ್.ಎಂ., ಬಿ.ಹೆಚ್.ಎಂ., ಎಂ.ಡಿ.ಎಸ್., ಎಂ.ಎಸ್.ಡಬ್ಲ್ಯೂ, ಎಲ್.ಎಲ್.ಎಂ., ಎಂ.ಎಫ್.ಎ., ಎಂ.ಎಸ್.ಸಿ. ಬಯೋ ಟೆಕ್ನಾಲಜಿ ಮತ್ತು ಎಂಎಸ್‍ಸಿ ಎಜಿ ಕೋರ್ಸುಗಳನ್ನು ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ನಿಗಧಿತ ನಮೂನೆ ಅರ್ಜಿಗಳನ್ನು ಸಂಬಂಧಪಟ್ಟ ಜಿಲ್ಲೆಯ ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ/ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಗಳಲ್ಲಿ ಅಥವಾ ಅಂತರ್ಜಾಲ ತಾಣ www.dbcdc.karnataka.gov.in  ರಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಸೂಕ್ತ ದಾಖಲೆಗಳೊಂದಿಗೆ ದಿ: 22/09/2021ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಉಪ ನಿರ್ದೇಶಕರು ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯ ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ/ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಅಶ್ವಿನ್ ನಿವಾಸ, ಎ ಬ್ಲಾಕ್, 2ನೇ ಪ್ಯಾರಲಾಲ್ ರಸ್ತೆ, ಗಾಂಧಿನಗರ, ಶಿವಮೊಗ್ಗ ಇಲ್ಲಿಗೆ ಖುದ್ದಾಗಿ ಅಥವಾ ಇಲಾಖೆಯ ವೆಬ್‍ಸೈಟ್ ಅಥವಾ ದೂ.ಸಂ.: 08182-229634 ನ್ನು ಸಂಪರ್ಕಿಸುವುದು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...