ಬೆಂಗಳೂರು: ಆಯಾ ಶಾಲೆಗಳಲ್ಲಿಯೇ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಪರಿಷ್ಕೃತ ಸುತ್ತೋಲೆ ಹೊರಡಿಸಿದೆ.
ರಾಜ್ಯ ಪಠ್ಯಕ್ರಮದ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸುವ ನಿರ್ಧಾರ ಪ್ರಶ್ನಿಸಿದ ಪ್ರಕರಣದ ತೀರ್ಪನ್ನು ಹೈಕೋರ್ಟ್ ಕಾಯ್ದಿರಿಸಿದೆ. ಇದರ ಬೆನ್ನಲ್ಲೇ ಶಿಕ್ಷಣ ಇಲಾಖೆ ಪರಿಷ್ಕೃತ ಸುತ್ತೋಲೆ ಹೊರಡಿಸಿ ಆಯಾ ಶಾಲೆಗಳನ್ನೇ ಪರೀಕ್ಷಾ ಕೇಂದ್ರಗಳಾಗಿ ಮಾರ್ಪಡಿಸಿದೆ.
ಮಕ್ಕಳ ಕಲಿಕೆ ಉತ್ತಮಗೊಳಿಸಲು 2022 -23 ನೇ ಸಾಲಿನಲ್ಲಿ ರಾಜ್ಯ ಪಠ್ಯಕ್ರಮದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಬೋರ್ಡ್ ಪರೀಕ್ಷೆ ನಡೆಸಲು ವೇಳಾಪಟ್ಟಿ ಪ್ರಕಟಿಸಿದೆ.
ಮಾರ್ಚ್ 13 ರಿಂದ 18 ರವರೆಗೆ ಮೌಲ್ಯಾಂಕನ ಪರೀಕ್ಷೆ ನಡೆಸಲಾಗುವುದು. ವಿದ್ಯಾರ್ಥಿಗಳ ಸಂಖ್ಯೆ ಆಧರಿಸಿ ಪರೀಕ್ಷಾ ಕೇಂದ್ರ ರಚಿಸಲು ಸೂಚಿಸಲಾಗಿದ್ದು, ಇದಕ್ಕೆ ಪೋಷಕರಿಂದ ಆಕ್ಷೇಪ ವ್ಯಕ್ತವಾದ ಹಿನ್ನೆಲೆಯಲ್ಲಿ ಆಯಾ ಶಾಲೆಗಳನ್ನೇ ಪರೀಕ್ಷಾ ಕೇಂದ್ರವಾಗಿಸಲು ಸೂಚನೆ ನೀಡಲಾಗಿದೆ.