ಬೆಂಗಳೂರು: ಎಸ್.ಎಸ್.ಎಲ್.ಸಿ. ಮತ್ತು ಪಿಯುಸಿ ಅಂತಿಮ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಕಡ್ಡಾಯ ತರಗತಿ ಹಾಜರಾತಿ ನಿಯಮದಲ್ಲಿ ಸಡಿಲಿಕೆ ಮಾಡಲು ಸರ್ಕಾರ ತೀರ್ಮಾನಿಸಿದೆ.
ಈ ಶೈಕ್ಷಣಿಕ ಸಾಲಿನಲ್ಲಿ ಭೌತಿಕ ತರಗತಿಗಳು ವಿಳಂಬವಾಗಿ ಆರಂಭವಾಗಿದ್ದು ಮತ್ತು ಆನ್ಲೈನ್ ಕ್ಲಾಸ್ ನಡೆಯುವ ಸಂದರ್ಭದಲ್ಲಿ ನೆಟ್ವರ್ಕ್ ಸಮಸ್ಯೆಗಳು ಉಂಟಾಗಿದ್ದನ್ನು ಮನಗಂಡು ಈ ಶೈಕ್ಷಣಿಕ ವರ್ಷದಲ್ಲಿ ಬೋರ್ಡ್ ಪರೀಕ್ಷೆಗಳಿಗೆ ಹಾಜರಾಗಲು ಶೇಕಡ 75 ರಷ್ಟು ಹಾಜರಾತಿಯನ್ನು ಕಡ್ಡಾಯಗೊಳಿಸದಿರಲು ಶಿಕ್ಷಣ ಇಲಾಖೆ ತಿರ್ಮಾನಿಸಿದೆ.
ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಭೌತಿಕ ತರಗತಿ ವಿಳಂಬ, ಆನ್ಲೈನ್ ಕ್ಲಾಸ್ ಸಮಯದಲ್ಲಿ ನೆಟ್ವರ್ಕ್ ಸಮಸ್ಯೆ ಮನಗಂಡು ಬೋರ್ಡ್ ಪರೀಕ್ಷೆಗಳಿಗೆ ಹಾಜರಾತಿ ನಿಯಮದಲ್ಲಿ ಸಡಿಲಿಕೆ ಮಾಡಲು ತೀರ್ಮಾನಿಸಲಾಗಿದೆ ಎಂದು ಹೇಳಿದ್ದಾರೆ.
ಕರ್ನಾಟಕ ಶಿಕ್ಷಣ ಕಾಯ್ದೆ ನಿಯಮದ ಅನ್ವಯ SSLC, PUC ಬೋರ್ಡ್ ಪರೀಕ್ಷೆಗಳಿಗೆ ಹಾಜರಾಗಲು ಶೇಕಡ 75ರಷ್ಟು ಹಾಜರಾತಿ ಕಡ್ಡಾಯವಾಗಿದ್ದು, ಈ ಬಾರಿ ನಿಯಮ ಸಡಿಲಿಕೆ ಮಾಡಲಾಗಿದೆ.