ಉಡುಪಿ: ಈ ಬಾರಿಯ ಮಕ್ಕಳ ದಿನಾಚರಣೆ ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ವಿಭಿನ್ನವಾಗಿ ಆಚರಿಸಲಾಯಿತು. ಈ ಮಕ್ಕಳ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸುದ್ದಿ ಮಾಡುತ್ತಿದ್ದು, ಜನರ ಶ್ಲಾಘನೆಗೆ ಕಾರಣವಾಗಿದೆ.
ಇದಕ್ಕೆ ಕಾರಣ, ವಿದ್ಯಾರ್ಥಿಗಳು ತಮ್ಮ ವ್ಯಾಪ್ತಿಯಲ್ಲಿನ ಗುಂಡಿಗಳನ್ನು ತುಂಬಿದರು. ಮಕ್ಕಳ ದಿನಾಚರಣೆಯ ಪ್ರಯುಕ್ತ ರಜಾ ದಿನವಾದ ಕಾರಣ ವಿದ್ಯಾರ್ಥಿಗಳು ಒಂದೆಡೆ ಸೇರಿ ರಸ್ತೆಯಲ್ಲಿನ ಗುಂಡಿಗಳನ್ನು ತುಂಬಿಸಿದ್ದಾರೆ.
ಹೊಂಡ ತುಂಬಿದ ರಸ್ತೆಗಳಲ್ಲಿ ಸಂಚರಿಸುವ ತಮ್ಮ ಹೋರಾಟಕ್ಕೆ ಅಂತ್ಯ ಹಾಡಲು ವಿದ್ಯಾರ್ಥಿಗಳು ಸಂಘಟಿತರಾಗಿ ಗುಂಡಿಗಳನ್ನು ತುಂಬಿಸಿ ಮಾದರಿಯಾಗಿದ್ದಾರೆ. ಶಾಲಾ-ಕಾಲೇಜು ವಿದ್ಯಾರ್ಥಿಗಳು ಆ ರಸ್ತೆಯನ್ನು ಪ್ರತಿದಿನ ಬಳಸುತ್ತಿದ್ದು, ಗುಂಡಿಗಳಿಂದಾಗಿ ಭಾರಿ ಹಿಂಸೆ ಅನುಭವಿಸುವಂತಾಗಿತ್ತು.
ರಸ್ತೆಗಳ ದುಃಸ್ಥಿತಿ ಹಾಗೂ ಗುಂಡಿಗಳಿಂದ ತುಂಬಿರುವ ಬಗ್ಗೆ ಸ್ಥಳೀಯ ಆಡಳಿತಕ್ಕೆ ಹಲವು ಬಾರಿ ಮನವಿ ಸಲ್ಲಿಸಿದರೂ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ. ಇದರಿಂದಾಗಿ ಮಕ್ಕಳೇ ಈಗ ಕಾರ್ಯಕ್ಕೆ ಮುಂದಾಗಿದ್ದು, ಅಧಿಕಾರಿಗಳು ತಲೆತಗ್ಗಿಸುವ ಕೆಲಸ ಮಾಡಿದ್ದಾರೆ.