ಕಲಬುರಗಿ: ರಾಜ್ಯದ 45 ಕಾಲೇಜುಗಳಲ್ಲಿ ನಾಲ್ಕು ಹೊಸ ಕೋರ್ಸ್ ಗಳನ್ನು ಆರಂಭಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ತಿಳಿಸಿದ್ದಾರೆ.
ಕಲಬುರಗಿಯಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಯುವಕರಲ್ಲಿ ಸೈದ್ಧಾಂತಿಕ, ಪ್ರಾಯೋಗಿಕ ಜ್ಞಾನ ಕೌಶಲ್ಯ ವೃದ್ಧಿಗೆ ರಾಜ್ಯದ 45 ಕಾಲೇಜುಗಳಲ್ಲಿ ನಾಲ್ಕು ಹೊಸ ಕೋರ್ಸ್ ಗಳನ್ನು ಪ್ರಸಕ್ತ ವರ್ಷದಿಂದ ಆರಂಭಿಸಲಾಗುವುದು. 1,500 ವಿದ್ಯಾರ್ಥಿಗಳಿಗೆ ಪ್ರವೇಶ ಸಿಗಲಿದೆ ಎಂದು ಹೇಳಿದ್ದಾರೆ.
ಕೇಂದ್ರದ ಸ್ಕಿಲ್ ಸೆಕ್ಟರ್ ಕೌನ್ಸಿಲ್ ಅಡಿ ಈ ಕೋರ್ಸ್ ಗಳನ್ನು ಆರಂಭಿಸಲಾಗುವುದು. ಬಿ.ಕಾಂ ಇನ್ ಲಾಜಿಸ್ಟಿಕ್, ಬಿ.ಕಾಂ ಇನ್ ಇ-ಕಾಮರ್ಸ್, ಬಿ.ಕಾಂ ಇನ್ ರಿಟೇಲ್, ಬ್ಯಾಂಕಿಂಗ್ ಅಂಡ್ ಫೈನಾನ್ಸ್ ಕೋರ್ಸ್ ಗಳು ಆರಂಭವಾಗಲಿದೆ. ಎರಡು ವರ್ಷ ಥಿಯರಿ ಮತ್ತು ಮೂರನೇ ವರ್ಷ ಸ್ಟೈಫಂಡ್ ಸಹಿತ ಇಂಟರ್ನ್ ಶಿಪ್ ಇರಲಿದೆ. ಇದಕ್ಕಾಗಿ ಸ್ಕಿಲ್ ಸೆಕ್ಟರ್ ಕೌನ್ಸಿಲ್ ನೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.