alex Certify ಪ್ರಧಾನಿ ಮೋದಿ ಓದಿದ ಶಾಲೆಗೆ ಭೇಟಿ ನೀಡಲಿದ್ದಾರೆ ದೇಶದ ಮಕ್ಕಳು; ವಿದ್ಯಾರ್ಥಿಗಳಿಗೆ ಸ್ಪೂರ್ತಿ ತುಂಬಲು ಈ ಯೋಜನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಧಾನಿ ಮೋದಿ ಓದಿದ ಶಾಲೆಗೆ ಭೇಟಿ ನೀಡಲಿದ್ದಾರೆ ದೇಶದ ಮಕ್ಕಳು; ವಿದ್ಯಾರ್ಥಿಗಳಿಗೆ ಸ್ಪೂರ್ತಿ ತುಂಬಲು ಈ ಯೋಜನೆ

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಓದಿದ ಗುಜರಾತ್ ನ ಮೆಹ್ಸಾನಾ ಜಿಲ್ಲೆಯ ವಡ್ನಾಗರದಲ್ಲಿರುವ ಪ್ರಾಥಮಿಕ ಶಾಲೆಗೆ ದೇಶಾದ್ಯಂತ ಪ್ರತಿ ಜಿಲ್ಲೆಯಿಂದ ಇಬ್ಬರು ವಿದ್ಯಾರ್ಥಿಗಳು ಭೇಟಿ ನೀಡಲಿದ್ದಾರೆ. ಒಂದು ವಾರದ ಅಧ್ಯಯನ ಪ್ರವಾಸದ ಭಾಗವಾಗಿ ಪ್ರತಿ ಜಿಲ್ಲೆಯಿಂದ ಇಬ್ಬರಂತೆ ದೇಶದ 750 ಜಿಲ್ಲೆಗಳಲ್ಲಿಂದ ವಿದ್ಯಾರ್ಥಿಗಳನ್ನು ಶಾಲೆಗೆ ಕರೆದೊಯ್ಯಲಾಗುತ್ತದೆ.

ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಸರ್ಕಾರ ‘ಪ್ರೇರಣಾ’ ಎಂದು ಸ್ಫೂರ್ತಿದಾಯಕ ಶಾಲೆಯಾಗಿ ಅಭಿವೃದ್ಧಿಪಡಿಸಲಾಗುವುದು. ಅಲ್ಲಿ ಬಹಳ ವಿಕಸನಗೊಂಡ ಜೀವನವನ್ನು ಹೇಗೆ ಬದುಕಬೇಕು ಎಂಬುದರ ಕುರಿತು ವಿದ್ಯಾರ್ಥಿಗಳಿಗೆ ತರಬೇತಿ ನೀಡಲಾಗುತ್ತದೆ ಎಂದು ತಿಳಿಸಿದೆ.

ಪ್ರತಿಯೊಬ್ಬ ವಿಶ್ವ ನಾಯಕನು ತನ್ನ ಪ್ರಾಥಮಿಕ ಶಿಕ್ಷಣ ಶಾಲೆಯನ್ನು ಎಂದಿಗೂ ಮರೆಯುವುದಿಲ್ಲ ಮತ್ತು ಈ ಭಾವನೆಯನ್ನು ರಕ್ಷಿಸಲು ಪ್ರತಿ ರಾಷ್ಟ್ರದ ಪ್ರಯತ್ನವಿದೆ. ಆದ್ದರಿಂದ, ಭಾರತ ಸರ್ಕಾರವೂ ಇದೇ ರೀತಿಯದ್ದನ್ನು ಮಾಡುತ್ತದೆ ಎಂದು ಮೂಲಗಳು ತಿಳಿಸಿವೆ.

ತಮ್ಮ ಒಂಬತ್ತು ವರ್ಷಗಳ ಅಧಿಕಾರಾವಧಿಯಲ್ಲಿ ದೇಶದ ಪ್ರಧಾನಿಯಾಗಿ ಮೋದಿ ಅವರು ಭಾರತವನ್ನು ವಿಶ್ವ ವೇದಿಕೆಗೆ ಕೊಂಡೊಯ್ದಿದ್ದಾರೆ ಮತ್ತು ವಿನಮ್ರ ಹಿನ್ನೆಲೆಯಿಂದ ಮೇಲಕ್ಕೆ ಏರಿದ್ದರಿಂದ ಅನೇಕರು ಸ್ಫೂರ್ತಿ ಪಡೆದಿದ್ದಾರೆ. ಹೀಗಾಗಿ ಶಾಲೆಯಲ್ಲಿ ಈ ಕಾರ್ಯಕ್ರಮವನ್ನು ಪ್ರೇರಣಾ ಎಂದು ಕರೆಯಲು ಇದು ಕಾರಣವಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜಂಟಿ ಕಾರ್ಯಕ್ರಮ ಇದಾಗಿದೆ. 1888ರಿಂದ 2018 ರವರೆಗೆ ಕಾರ್ಯನಿರ್ವಹಿಸುತ್ತಿದ್ದ ಮೋದಿ ಓದಿದ ಶಾಲೆಯನ್ನು ವಡ್ನಾನಗರದ ಮೆಗಾ ಪುನರಾಭಿವೃದ್ಧಿ ಯೋಜನೆಯ ಭಾಗವಾಗಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್‌ಐ) ಪುನಃಸ್ಥಾಪಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಯೋಜನೆಯ ಪ್ರತಿ ಬ್ಯಾಚ್ 30 ವಿದ್ಯಾರ್ಥಿಗಳನ್ನು ಒಳಗೊಂಡಿರುವ ಸಾಧ್ಯತೆಯಿದೆ. ಇದು ಕೇವಲ ಬೋಧನೆಯಲ್ಲ, ಇದು ಅನುಭವದ ಶಾಲೆಯಾಗಿದೆ. ವಿದ್ಯಾರ್ಥಿಗಳ ಆಯ್ಕೆಯ ಮಾನದಂಡವನ್ನು ಇನ್ನೂ ನಿರ್ಧರಿಸಲಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...