alex Certify ಸಾವರ್ಕರ್ ಭಾವಚಿತ್ರ ವಿವಾದ; 6 ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಾವರ್ಕರ್ ಭಾವಚಿತ್ರ ವಿವಾದ; 6 ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲು

ಮಂಗಳೂರು: ಸಾವರ್ಕರ್ ಭಾವಚಿತ್ರ ವಿಚಾರವಾಗಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ 6 ವಿದ್ಯಾರ್ಥಿಗಳ ವಿರುದ್ಧ ಪಾಂಡವೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರು ಕಾಲೇಜು ಆಡಳಿತ ಮಂಡಳಿ ನೀಡಿದ ದೂರಿನ ಮೇರೆಗೆ ಮರ್ಕಜ್, ಅಬೂಬಕ್ಕರ್ ಸಿದ್ಧಕಿ, ಮಹಮದ್ ಹಫೀಜ್, ಪ್ರಜನ್, ಸ್ವಸ್ತಿಕ್ ಹಾಗೂ ಗುರುಕಿರಣ್ ಎಂಬ ವಿದ್ಯಾರ್ಥಿಗಳ ವಿರುದ್ಧ ಕೇಸ್ ದಾಖಲಾಗಿದೆ.

ಕಾಲೇಜಿನಲ್ಲಿ ನಿನ್ನೆ ಸಾವರ್ಕರ್ ಫೋಟೋ ವಿಚಾರವಾಗಿ ಗಲಾಟೆ ಆರಂಭವಾಗಿ ಪ್ರಾಂಶುಪಾಲರಿಗೆ ದೂರು ನೀಡಿದ್ದ ವಿದ್ಯಾರ್ಥಿಗಳ ಮೇಲೆ ಇತರ ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದರು. ಹಲ್ಲೆ ನಡೆಸಿದ ವಿದ್ಯಾರ್ಥಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಿಎಫ್ಐ, ಎನ್ ಎಸ್ ಯು ಐ ಸಂಘಟನೆ ಪ್ರತಿಭಟನೆ ನಡೆಸಿತ್ತು. ಇದೀಗ 6 ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...