ಶಿವಮೊಗ್ಗ: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಇಬ್ಬರು ಶಿಕ್ಷಕರನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಅಮಾನತು ಮಾಡಿದ್ದಾರೆ.
ಶಿಕಾರಿಪುರದ ಸೊಪ್ಪಿನ ಕೇರಿಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಸಹ ಶಿಕ್ಷಕ ಶಾಂತಕುಮಾರ್ ಮತ್ತು ಮುಖ್ಯ ಶಿಕ್ಷಕ ನಾಗರಾಜ ಕೋರಿ ಅವರನ್ನು ಅಮಾನತು ಮಾಡಲಾಗಿದೆ.
ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಪರಿಶೀಲನೆ ನಡೆಸಿ ಡಿಡಿಪಿಗೆ ವರದಿ ನೀಡಿದ್ದಾರೆ. ಇದರ ಆಧಾರದ ಮೇಲೆ ಕ್ರಮ ಕೈಗೊಂಡು ಮುಖ್ಯ ಶಿಕ್ಷಕ ಹಾಗೂ ಸಹ ಶಿಕ್ಷಕನನ್ನು ಅಮಾನತು ಮಾಡಲಾಗಿದೆ ಎಂದು ಹೇಳಲಾಗಿದೆ.