alex Certify ಹಾಸ್ಟೆಲ್ ನಲ್ಲಿ ಊಟ ಸೇವಿಸಿದ ಬಳಿಕ 45 ಮಕ್ಕಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಾಸ್ಟೆಲ್ ನಲ್ಲಿ ಊಟ ಸೇವಿಸಿದ ಬಳಿಕ 45 ಮಕ್ಕಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

ರಾಯಚೂರು: ಹಾಸ್ಟೆಲ್ ನಲ್ಲಿ ಊಟ ಸೇವಿಸಿದ ಬಳಿಕ 45 ವಿದ್ಯಾರ್ಥಿನಿಯರು ಅಸ್ವಸ್ಥರಾದ ಘಟನೆ ರಾಯಚೂರಿನ ಅರಕೇರಾದಲ್ಲಿ ನಡೆದಿದೆ.

ಅರಕೆರೆ ಪಟ್ಟಣದ ಪರಿಶಿಷ್ಟ ಪಂಗಡ ಬಾಲಕಿಯರ ವಸತಿ ನಿಲಯದಲ್ಲಿ ನಿನ್ನೆ ರಾತ್ರಿ ಊಟ ಸೇವಿಸಿದ ವಿದ್ಯಾರ್ಥಿನಿಯರಿಗೆ ವಾಂತಿ, ಭೇದಿ, ತಲೆ ಸುತ್ತು ಕಾಣಿಸಿಕೊಂಡು ಅಸ್ವಸ್ಥರಾಗಿದ್ದಾರೆ. 45ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅರಕೇರಾದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಕ್ಕಳನ್ನು ದಾಖಲಿಸಿದ್ದು, ಪೋಷಕರು ಸ್ಥಳಕ್ಕೆ ಭೇಟಿ ನೀಡಿ ಹಾಸ್ಟೆಲ್ ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಸುರೇಂದ್ರಬಾಬು ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ. ಆಹಾರದ ಸ್ಯಾಂಪಲ್ ಪರೀಕ್ಷೆಗೆ ಕಳುಹಿಸಲಾಗಿದೆ. ಎಲ್ಲ ಮಕ್ಕಳು ಆರೋಗ್ಯವಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...