ಬೆಂಗಳೂರಿನ ಪ್ರತಿಷ್ಠಿತ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ನಾಪತ್ತೆಯಾಗಿದ್ದಾರೆ. ಅವರು, ನಾವಿನ್ನು ಮನೆಗೆ ಬರುವುದಿಲ್ಲ. ನಮ್ಮನ್ನು ಹುಡುಕಬೇಡಿ ಎಂದು ತಿಳಿಸಿ ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ.
ಹರ್ಷಿತಾ ಹಾಗೂ ಮರಿಟಾ ಎಂಬ ಈ ಇಬ್ಬರು ವಿದ್ಯಾರ್ಥಿನಿಯರು ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದು, ಆತ್ಮೀಯ ಸ್ನೇಹಿತೆಯರಾಗಿದ್ದರು. ಇವರಿಬ್ಬರ ನಾಪತ್ತೆಯಿಂದ ಆತಂಕಗೊಂಡಿರುವ ಪೋಷಕರು ಹೈ ಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಇದ್ದಕ್ಕಿದ್ದಂತೆ ಈ ವಿದ್ಯಾರ್ಥಿನಿಯರು ನಾಪತ್ತೆಯಾಗಿರುವುದು ಹೇಗೆ ? ಇದರ ಹಿಂದೆ ಯಾರದ್ದಾದರೂ ಕೈವಾಡವಿದೆಯಾ ಎಂಬುದರ ಕುರಿತು ತನಿಖೆ ಕೈಗೊಂಡಿದ್ದಾರೆ.