ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ತಾಲೂಕಿನ ಸುರತ್ಕಲ್ ಪಟ್ಟಣದ ನಾಲ್ವರು ವಿದ್ಯಾರ್ಥಿಗಳು ನಾಪತ್ತೆಯಾಗಿದ್ದಾರೆ.
ಎಸ್.ಎಸ್.ಎಲ್.ಸಿ. ಪ್ರಿಪರೇಟರಿ ಪರೀಕ್ಷೆ ಬಳಿಕ 4 ವಿದ್ಯಾರ್ಥಿಗಳು ನಾಪತ್ತೆಯಾಗಿದ್ದಾರೆ. ಸುರತ್ಕಲ್ ನ ವಿದ್ಯಾದಾಯಿನಿ ಶಾಲೆಯ ನಾಲ್ವರು ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ. ಪೂರ್ವ ಸಿದ್ಧತಾ ಪರೀಕ್ಷೆ ಬರೆದು ಶಾಲೆಯಿಂದ ಹೊರಬಂದ ಬಳಿಕ ನಾಪತ್ತೆಯಾಗಿದ್ದಾರೆ. ಯಶ್ವಿತ್ ಚಂದ್ರಕಾಂತ್, ನಿರೂಪ್, ಆನ್ವಿತ್, ರಾಘವೇಂದ್ರ ನಾಪತ್ತೆಯಾದ ವಿದ್ಯಾರ್ಥಿಗಳು ಎಂದು ಹೇಳಲಾಗಿದೆ. ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.