ಶಿವಮೊಗ್ಗ : ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು 2024-25ನೇ ಸಾಲಿಗೆ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಪಾರ್ಸಿ, ಬೌದ್ಧ ಮತ್ತು ಸಿಖ್ ಸಮುದಾಯದ 35 ವರ್ಷ ವಯೋಮಿತಿಯುಳ್ಳ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯಗಳಲ್ಲಿ ಪಿಹೆಚ್ಡಿ ಫೆಲೋಶಿಪ್ ಯೋಜನೆಯಡಿ ಅರ್ಜಿಗಳನ್ನು ಆಹ್ವಾನಿಸಿದೆ.
ಆಸಕ್ತ ವಿದ್ಯಾರ್ಥಿಗಳು ಸೇವಾ ಸಿಂದು sevasindhu.karnataka.gov.in ಪೋರ್ಟಲ್ನಲ್ಲಿ ಆಗಸ್ಟ್ 31ರೊಳಗಾಗಿ ಸಲ್ಲಿಸಿ, ಅರ್ಜಿಯ ಪ್ರತಿಯನ್ನು ಅಗತ್ಯ ದಾಖಲೆಗಳೊಂದಿಗೆ ಜಿಲ್ಲಾ ಅಧಿಕಾರಿಗಳ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, 1ನೇ ಮಹಡಿ, ಸತ್ಯಶ್ರೀ ಆರ್ಕೇಡ್, 5ನೇ ಪ್ಯಾರಲಲ್ ರಸ್ತೆ, ದುರ್ಗಿಗುಡಿ, ಶಿವಮೊಗ್ಗ ಇಲ್ಲಿಗೆ ಸಲ್ಲಿಸುವಂತೆ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಗಳಾಗಿದ್ದು, ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದವರಾಗಿರಬೇಕು. ಪೂರ್ಣಕಾಲಿಕ ಕೋರ್ಸ್ನ ವಿದ್ಯಾರ್ಥಿಗಳು ಮಾತ್ರ ಅರ್ಹರಾಗಿರುತ್ತಾರೆ. ವಾರ್ಷಿಕ ಆದಾಯ ಮಿತಿ ರೂ. 8.00 ಲಕ್ಷಗಳನ್ನು ಮೀರಿರಬಾರದು. ಸರ್ಕಾರದ ಶಾಸನಬದ್ಧ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಲ್ಲಿ ಪ್ರವೇಶ ಪಡೆದಿರಬೇಕು.ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-220206 ನ್ನು ಸಂಪರ್ಕಿಸುವುದು ಎಂದು ಪ್ರಕಟಣೆ ತಿಳಿಸಿದೆ.