ಮಡಿಕೇರಿ : ವಿರಾಜಪೇಟೆ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯ ಪರಿಶಿಷ್ಟ ಜಾತಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಿಗೆ 2024-25ನೇ ಸಾಲಿಗೆ ಆಸಕ್ತ ಮತ್ತು ಅರ್ಹ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಂದ ನಿಲಯಗಳಿಗೆ ದಾಖಲಾಗಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಪೊನ್ನಂಪೇಟೆ, ವಿರಾಜಪೇಟೆ, ಕಾಕೋಟುಪರಂಬು ಮತ್ತು ಬಾಳಲೆ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯಗಳು, ಪೊನ್ನಂಪೇಟೆ, ವಿರಾಜಪೇಟೆ ಮತ್ತು ಪಾಲಿಬೆಟ್ಟ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯಗಳು.
ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಿಗೆ 5ನೇ ತರಗತಿಯಿಂದ 10ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿಗಳನ್ನು ಆನ್ಲೈನ್ ಮುಖಾಂತರ ಸಲ್ಲಿಸಬಹುದಾಗಿರುತ್ತದೆ. ವಿದ್ಯಾರ್ಥಿ ನಿಲಯಗಳಲ್ಲಿ ವಸತಿ, ಊಟ-ತಿಂಡಿ, ಪುಸ್ತಕ, ಸಮವಸ್ತ್ರ ಹಾಗೂ ಇತರೆ ನಿಲಯಗಳಲ್ಲಿ ಲಭ್ಯವಾಗುವ ಮೂಲಭೂತ ಸೌಲಭ್ಯಗಳು ಸಂಪೂರ್ಣ ಉಚಿತವಾಗಿರುತ್ತದೆ.
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ಹಾಗೂ ಅಲ್ಪಸಂಖ್ಯಾತರ ವಿದ್ಯಾರ್ಥಿಗಳು ಸಹ ನಿಲಯಗಳಿಗೆ ಪ್ರವೇಶ ಪಡೆಯಲು ಕೂಡ ನಿಯಮಾನುಸಾರ ಅರ್ಹರಾಗಿರುತ್ತಾರೆ. ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ವೆಬ್ಸೈಟ್ www.sw.kar.nic.in ಪೋರ್ಟಲ್ ಮೂಲಕ ಸಲ್ಲಿಸಿ ನಂತರ ಆನ್ಲೈನ್ ಪ್ರತಿಯೊಂದಿಗೆ ಆಧಾರ್ ಕಾರ್ಡ್, ಜಾತಿ, ಆದಾಯ ಪ್ರಮಾಣ ಪತ್ರ ಹಾಗೂ ಮಾಕ್ರ್ಸ್ ಕಾರ್ಡ್ನ ಪ್ರತಿಗಳನ್ನು ಸಂಬಂಧಿಸಿದ ನಿಲಯಗಳ ಮೇಲ್ವಿಚಾರಕರಿಗೆ ಸಲ್ಲಿಸುವಂತೆ ಪೊನ್ನಂಪೇಟೆ, ವಿರಾಜಪೇಟೆ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.