ಶಿವಮೊಗ್ಗ : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಸಮಾಜ ಕಲ್ಯಾಣ ಇಲಾಖೆಯಿಂದ 2023-24 ನೇ ಸಾಲಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಸೌಲಭ್ಯ ನೀಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಈ ಯೋಜನೆಯಡಿ ನವೀನ ವಿದ್ಯಾರ್ಥಿಗಳು ಹಾಗೂ ಕಾರಣಾಂತರಗಳಿಂದ ಇದುವರೆಗೂ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸದೇ ಇರುವ ನವೀಕರಣ ವಿದ್ಯಾರ್ಥಿಗಳು ಮತ್ತು ಕಳೆದ ಸಾಲಿನಲ್ಲಿ ವಿದ್ಯಾರ್ಥಿಗಳ ಖಾತೆಗೆ ವಿದ್ಯಾರ್ಥಿವೇತನ ಜಮೆಯಾಗದೇ ಇರುವ ವಿದ್ಯಾರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಸಾಗರ ತಾಲ್ಲೂಕು, ದೂರವಾಣಿ ಸಂಖ್ಯೆ: 9480843192 ನ್ನು ಸಂಪರ್ಕಿಸಬಹುದೆಂದು ಸಾಗರ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು(ಗ್ರೇಡ್-2) ತಿಳಿಸಿದ್ದಾರೆ.