ಬೆಂಗಳೂರು : 2024-25ನೇ ಸಾಲಿನ NMMS ಪರೀಕ್ಷೆಗೆ ಸಂಬಂಧಿಸಿದಂತೆ ಶುಲ್ಕವನ್ನು ಪಾವತಿಸಲು ನ.11 ಕೊನೆಯ ದಿನವಾಗಿದೆ.2024-25ನೇ ಸಾಲಿನ NMMS ಪರೀಕ್ಷೆಯನ್ನು ದಿನಾಂಕ:08.12.2024 ರಂದು ನಡೆಸಲಾಗುತ್ತಿದ್ದು, ಉಲ್ಲೇಖಿತ ಸುತ್ತೋಲೆಯಲ್ಲಿ ದಿನಾಂಕ:19.08.2024 ರಿಂದ 05.10.2024 ರವರೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ಅವಕಾಶವನ್ನು ನೀಡಲಾಗಿತ್ತು. ಸದರಿ ಪರೀಕ್ಷೆಗೆ ಅರ್ಜಿ ಸಲ್ಲಿಸಿರುವ ವಿದ್ಯಾಥಿಗಳ ಪರೀಕ್ಷಾ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಲು ದಿsನಾಂಕ: 05.11.2024 ರವರೆಗೆ ಅವಕಾಶವನ್ನು ಕಲ್ಪಿಸಲಾಗಿತ್ತು.
ಮುಂದುವರೆದು ಪರೀಕ್ಷಾ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಲು ದಿನಾಂಕ:11.11.2024 ರವರೆಗೆ ಅವಕಾಶವನ್ನು ಕಲ್ಪಿಸಲಾಗಿದ್ದು, ನಿಗದಿತ ದಿನಾಂಕದೊಳಗೆ ಶುಲ್ಕವನ್ನು ಪಾವತಿಸುವಂತೆ ಎಲ್ಲಾ ಶಾಲಾ ಮುಖ್ಯ ಶಿಕ್ಷಕರು ಹಾಗೂ ಪ್ರಾಂಶುಪಾಲರಿಗೆ ಮಾಹಿತಿ ನೀಡುವಂತೆ ಉಪನಿರ್ದೇಶಕರು (ಆಡಳಿತ) ಮತ್ತು (ಅಭಿವೃದ್ಧಿ) ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಈ ಮೂಲಕ ಸೂಚಿಸಿದೆ.