ಬೆಂಗಳೂರು: ಅಮೆರಿಕದಲ್ಲಿ ವ್ಯಾಸಂಗ ಮಾಡಲು ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಸಹಕಾರ ನೀಡಲಾಗುವುದು. ಉನ್ನತ ಶಿಕ್ಷಣದಲ್ಲಿ ಅಮೆರಿಕ ವಿಶ್ವವಿದ್ಯಾಲಯಗಳೊಂದಿಗೆ ಅಂತರರಾಷ್ಟ್ರೀಯ ಪಾಲುದಾರಿಕೆ ಮತ್ತು ಸಹಯೋಗದ ಶಿಕ್ಷಣಕ್ಕೆ ಭಾರತೀಯ ವಿದ್ಯಾರ್ಥಿಗಳಿಗೆ ಅವಕಾಶ ಮಾಡಿಕೊಡಲು ಸರ್ಕಾರ ಮುಕ್ತವಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ತಿಳಿಸಿದ್ದಾರೆ.
ಕೌಶಲಾಧಾರಿತ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುವುದು ನಮ್ಮ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ನಮ್ಮ ವಿದ್ಯಾರ್ಥಿಗಳು ಅಮೆರಿಕಕ್ಕೆ ತೆರಳಿ ಅಧ್ಯಯನ ಮಾಡುವುದು ಕೆಲವರಿಗೆ ಆರ್ಥಿಕವಾಗಿ ಸಾಧ್ಯವಾಗುವುದಿಲ್ಲ. ಹಾಗಾಗಿ ಅಮೆರಿಕ ಮತ್ತು ಕರ್ನಾಟಕ ಸರ್ಕಾರಿ ವಿವಿಗಳು ಒಟ್ಟಾಗಿ ತರಗತಿಗಳನ್ನು ನಡೆಸುವಂತಾಗಬೇಕು. ಇದಕ್ಕೆ ನಮ್ಮ ಸಂಪೂರ್ಣ ಸಹಕಾರವಿದೆ ಎಂದು ತಿಳಿಸಿದ್ದಾರೆ.