alex Certify ಪೊಲೀಸ್ ಇಲಾಖೆ ಸಿಬ್ಬಂದಿ ಮಕ್ಕಳ ಶಿಕ್ಷಣಕ್ಕೆ ಆರ್ಥಿಕ ನೆರವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪೊಲೀಸ್ ಇಲಾಖೆ ಸಿಬ್ಬಂದಿ ಮಕ್ಕಳ ಶಿಕ್ಷಣಕ್ಕೆ ಆರ್ಥಿಕ ನೆರವು

ಬೆಂಗಳೂರು: ಬೆಂಗಳೂರು ನಗರ ಪೊಲೀಸ್ ಘಟಕದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ಮಕ್ಕಳ ಉನ್ನತ ಶಿಕ್ಷಣಕ್ಕೆ ಪೊಲೀಸ್ ಕಲ್ಯಾಣ ನಿಧಿಯಿಂದ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಸಂಬಂಧಿಸಿದ ಡಿಸಿಪಿ ಕಚೇರಿ ಮೂಲಕ ಅಕ್ಟೋಬರ್ 20 ರೊಳಗೆ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ. ಪದವಿ, ಸ್ನಾತಕೋತ್ತರ ಪದವಿಯಲ್ಲಿ ಹಿಂದಿನ ಪರೀಕ್ಷೆಯಲ್ಲಿ ಶೇಕಡ 60ಕ್ಕೂ ಹೆಚ್ಚು ಅಂಕ ಪಡೆದಿರಬೇಕು.

ಡಿಪ್ಲೋಮಾ ಕೋರ್ಸ್, ಪದವಿ ವಿದ್ಯಾರ್ಥಿಗಳಿಗೆ 10 ಸಾವಿರ ರೂ., ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ 20 ಸಾವಿರ ರೂ., ಎಂಇ, ಎಂಟೆಕ್, ಎಲ್.ಎಲ್.ಎಂ., ಎಂ.ವಿ.ಎಸ್. ಪದವಿ ವಿದ್ಯಾರ್ಥಿಗಳಿಗೆ 30 ಸಾವಿರ ರೂ., ವೈದ್ಯಕೀಯ ಪದವಿ ವಿದ್ಯಾರ್ಥಿಗಳಿಗೆ 25 ಸಾವಿರ ರೂ., ವೈದ್ಯಕೀಯ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ 40 ಸಾವಿರ ರೂ. ನೀಡಲಾಗುವುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...