ಶಿವಮೊಗ್ಗ: ಮೆಟ್ರಿಕ್ ನಂತರದ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ/ ಅರೆಅಲೆಮಾರಿ ವಿದ್ಯಾರ್ಥಿಗಳಿಂದ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ”, “ಶುಲ್ಕ ವಿನಾಯಿತಿ”, ಮತ್ತು “ ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ ಯೋಜನೆ” ಸೌಲಭ್ಯಕ್ಕಾಗಿ ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅರ್ಹ ವಿದ್ಯಾರ್ಥಿಗಳು www.ssp.postmatric.karnataka.gov.in/2122 ವೆಬ್ ಸೈಟ್ ಮೂಲಕ ದಿ:31-10-2021ರೊಳಗಾಗಿ ಅರ್ಜಿ ಸಲ್ಲಿಸುವುದು. ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ-1, ಎಸ್.ಸಿ ಮತ್ತು ಎಸ್.ಟಿ ವಿದ್ಯಾರ್ಥಿಗಳಿಗೆ ರೂ.2.50 ಲಕ್ಷ ಹಾಗೂ ಪ್ರವರ್ಗ 2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ ವರ್ಗ ಹಾಗೂ ಇತರೆ ವಿದ್ಯಾರ್ಥಿಗಳಿಗೆ ರೂ.1.00 ಲಕ್ಷದ ಒಳಗಿರಬೇಕು.
ಹೆಚ್ಚಿನ ಮಾಹಿತಿಗಾಗಿ ವಿದ್ಯಾರ್ಥಿಗಳು www.bcwd.karnataka.gov.in ವೆಬ್ ಸೈಟ್ ಗೆ ಭೇಟಿ ನೀಡಬಹುದು ಅಥವಾ ಸಹಾಯವಾಣಿ 8050770005 ಅಥವಾ 8050770004 ಗೆ ಕರೆ ಮಾಡಬಹುದು ಎಂದು ಭದ್ರಾವತಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲ್ಲೂಕು ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.