ದಾವಣಗೆರೆ: ರಾಜ್ಯ ಸರ್ಕಾರದ ಕ್ರೀಡಾ ವಿದ್ಯಾರ್ಥಿ ವೇತನ ಯೋಜನೆಯಡಿ ಪ್ರತಿಭಾವಂತ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಮಾಧ್ಯಮಿಕ/ಪ್ರೌಢಶಾಲಾ ವಿದ್ಯಾರ್ಥಿ ಕ್ರೀಡಾಪಟು(6ನೇ ತರಗತಿಯಿಂದ 10ನೇ ತರಗತಿ) ಗಳಿಗೆ ವಾರ್ಷಿಕ 10,000 ರೂ.ದಂತೆ ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನವನ್ನು ನೀಡುವ ಯೋಜನೆ ಇಲಾಖೆಯಲ್ಲಿ ಜಾರಿಯಲ್ಲಿದೆ.
ಈ ಯೋಜನೆಯನ್ವಯ ಪ್ರಸ್ತುತ ಮಾಧ್ಯಮಿಕ ಅಥವಾ ಪ್ರೌಢಶಾಲೆಯಲ್ಲಿ ಓದುತ್ತಿರುವ ಕ್ರೀಡಾಪಟುಗಳಿಗೆ ವಿದ್ಯಾರ್ಥಿವೇತನ ನೀಡಲಾಗುವುದು. ಆದ್ದರಿಂದ 2021-22ನೇ ಸಾಲಿನ ವಿದ್ಯಾರ್ಥಿ ವೇತನಕ್ಕಾಗಿ ಅರ್ಹ ಕ್ರೀಡಾಪಟುಗಳಿಂದ ಅಧಿಕೃತ ಜಾಲತಾಣ: http://serviceonline.gov.in/karnataka ಮೂಲಕ ಆನ್ಲೈನ್ನಲ್ಲಿ ಅರ್ಜಿಗಳನ್ನು ಸಲ್ಲಿಸಲು ಜು.15 ಅವಧಿಯನ್ನು ವಿಸ್ತರಿಸಲಾಗಿದೆ. ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.