ಬೆಂಗಳೂರು: 2022- 23ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇಕಡ 80ಕ್ಕಿಂತ ಹೆಚ್ಚು ಅಂಕ ಪಡೆದು ಪ್ರಸಕ್ತ ಸಾಲಿನಲ್ಲಿ ಉನ್ನತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಮತ್ತು ಉನ್ನತ ಶಿಕ್ಷಣ ಇಲಾಖೆಯಿಂದ ವಿದ್ಯಾರ್ಥಿ ವೇತನ ನೀಡಲಾಗುವುದು.
ಪ್ರಧಾನಮಂತ್ರಿ ಉನ್ನತ ಶಿಕ್ಷಣ ಪ್ರೋತ್ಸಾಹ ಕೇಂದ್ರವಲಯ ಯೋಜನೆಯಡಿ ವಿದ್ಯಾರ್ಥಿ ವೇತನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳು www.scholarships.gov.in ವೆಬ್ಸೈಟ್ ಮೂಲಕ ನೋಂದಾಯಿಸಿಕೊಳ್ಳಬಹುದಾಗಿದೆ. ಡಿಸೆಂಬರ್ 31 ಕೊನೆಯ ದಿನವಾಗಿದ್ದು, ಹೊಸ ಹಾಗೂ ನವೀಕರಣ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಆಧಾರ್ ನೋಂದಣಿ ಸಂಖ್ಯೆಯನ್ನು ಬ್ಯಾಂಕ್ ಖಾತೆಗೆ ಜೋಡಣೆ ಮಾಡಬೇಕೆಂದು ತಿಳಿಸಲಾಗಿದೆ.