alex Certify ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಕಲಬುರಗಿ: ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ ಅರೇ ಅಲೆಮಾರಿ ವಿದ್ಯಾರ್ಥಿಗಳಿಂದ 2020-21ನೇ ಸಾಲಿಗೆ ವಿಧ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಹಾಗೂ ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸೌಲಭ್ಯಕ್ಕಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಆನ್‍ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.

ಅರ್ಜಿಯನ್ನು ವೆಬ್‍ಸೈಟ್ www.ssp.postmatric.karnataka.gov.in ಮೂಲಕ ದಿ.05-03-2021 ರೊಳಗೆ ಸಲ್ಲಿಸಬೇಕು ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.

ವಿಧ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಹಾಗೂ ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸೌಲಭ್ಯದ ಕುರಿತ ವಿವರವಾದ ಮಾಹಿತಿಗೆ ಇಲಾಖೆಯ ವೆಬ್‍ಸೈಟ್ www.bcwd.karnataka.gov.in  ವೀಕ್ಷಿಸಬಹುದಾಗಿದೆ.

ಈ ಕುರಿತು ಹೆಚ್ಚಿನ ಮಾಹಿತಿಗೆ ಇಲಾಖೆಯ ಸಹಾಯವಾಣಿ ಸಂಖ್ಯೆ 8050770005, 8050770004 ಹಾಗೂ ಇಮೇಲ್ ವಿಳಾಸ bcwd.scholarship@karnataka.gov.in ಹಾಗೂ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ ಸಹಾಯವಾಣಿ ಸಂಖ್ಯೆ 080-35254757 ಮತ್ತು ಇಮೇಲ್ ವಿಳಾಸ postmetrichelpdesk@karnataka.gov.in ಸಂಪರ್ಕಿಸಬಹುದಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...