
ಬೆಂಗಳುರು : ಸ್ನಾತಕೋತ್ತರ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಸುವ ಅವಧಿಯನ್ನು ಆಗಸ್ಟ್ 13 ರವರೆಗೆ ವಿಸ್ತರಿಸಲಾಗಿದೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು, ವಿದ್ಯಾರ್ಥಿಗಳ ಹಿತದೃಷ್ಟಯಿಂದ ಸ್ನಾತಕೋತ್ತರ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ಇಲ್ಲಿಯವರೆಗೆ ನೋಂದಣಿ ಮಾಡದಿರುವವರು ಅರ್ಜಿ ಸಲ್ಲಿಸಬಹುದು.