ಬೆಂಗಳೂರು : ಸಮಾಜ ಕಲ್ಯಾಣ ಇಲಾಖೆಯು ಪ್ರಥಮ ಬಾರಿಯ ಪರೀಕ್ಷೆಯಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಪ್ರಥಮ ಬಾರಿಗೆ ಪರೀಕ್ಷೆಯಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಂದ ಪ್ರೈಜ್ ಮನಿಗೆ ಅರ್ಜಿ ಸಲ್ಲಿಸಲು ಇದೇ ಮಾರ್ಚ್ 10, 2024 ಕೊನೆಯ ದಿನಾಂಕವಾಗಿದೆ.
ಕೊನೆಯ ದಿನಾಂಕವನ್ನು ಮತ್ತೊಮ್ಮೆ ವಿಸ್ತರಿಸಲಾಗುವುದಿಲ್ಲವಾದ್ದರಿಂದ, ಅರ್ಹ ವಿದ್ಯಾರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ.