ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ 2 ಪ್ರವೇಶ ಪತ್ರದಲ್ಲಿ ತಾಂತ್ರಿಕ ಕಾರಣಗಳಿಂದ ಕೆಲವು ವಿದ್ಯಾರ್ಥಿಗಳು ನೋಂದಾಯಿಸಿದ ವಿಷಯಗಳಿಗಿಂತ ಹೆಚ್ಚಿನ ವಿಷಯಗಳು ನೋಂದಣಿಯಾಗಿವೆ. ಅಂತಹ ವಿದ್ಯಾರ್ಥಿಗಳು ಆತಂಕ ಪಡಬೇಕಿಲ್ಲ. ಅವರು ನೋಂದಾಯಿತ ವಿಷಯಗಳ ಪರೀಕ್ಷೆಗೆ ಮಾತ್ರ ಹಾಜರಾದರೆ ಹಾಕು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾಹಿತಿ ನೀಡಿದೆ.
ಕೆಲವು ವಿದ್ಯಾರ್ಥಿಗಳು ನೋಂದಾಯಿಸಿದ್ದಕ್ಕಿಂತ ಹೆಚ್ಚುವರಿ ವಿಷಯಗಳು ಮುದ್ರಣವಾಗಿರುವುದು ಗಮನಕ್ಕೆ ಬಂದಿದೆ. ಇದರಿಂದ ಯಾವುದೇ ಸಮಸ್ಯೆ ಆಗುವುದಿಲ್ಲ. ನೋಂದಾಯಿಸಿಲ್ಲದ ವಿಷಯಗಳ ಪರೀಕ್ಷೆಗೆ ಹಾಜರಾಗುವ ಅಗತ್ಯವಿಲ್ಲ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸ್ಪಷ್ಟಪಡಿಸಿದೆ.
ಏಪ್ರಿಲ್ 29 ರಿಂದ ಮೇ 6ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ 2 ನಡೆಯಲಿದ್ದು ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕೆಎಸ್ಆರ್ಟಿಸಿ, ಬಿಎಂಟಿಸಿ ಸೇರಿ ರಾಜ್ಯ ರಸ್ತೆ ಸಾರಿಗೆಯ ಎಲ್ಲಾ ನಿಗಮಗಳ ಬಸ್ ಗಳಲ್ಲಿ ಪರೀಕ್ಷಾ ದಿನಗಳಂದು ಉಚಿತವಾಗಿ ಪ್ರಯಾಣಿಸಲು ಸರ್ಕಾರ ಅವಕಾಶ ಕಲ್ಪಿಸಿದೆ. ತಮ್ಮ ಪರೀಕ್ಷೆಯ ಪ್ರವೇಶ ಪತ್ರ ತೋರಿಸಿ ವಿದ್ಯಾರ್ಥಿಗಳು ಉಚಿತವಾಗಿ ಪ್ರಯಾಣಸಬಹುದಾಗಿದೆ.