ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ತಿರುವರಂಗ ಸೇತುವೆ ಬಳಿ ಒಂದೇ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಲಕ್ಕೂರು ಪಿಯು ಕಾಲೇಜಿನಲ್ಲಿ ಓದುತ್ತಿರುವ 18 ವರ್ಷದ ಸುಪ್ರೀತಾ ಮತ್ತು ರಾಜೇಶ್ವರಿ ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ.
ಮಾಲೂರು ಮೂಲದ ಸುಪ್ರಿತಾ ಮತ್ತು ಹೊಸಕೋಟೆ ತಾಲೂಕಿನ ಬಾಗೂರು ಮೂಲದ ರಾಜೇಶ್ವರಿ ಒಟ್ಟಿಗೆ ನಾಲೆಗೆ ಹಾರಿದ್ದಾರೆ. ಅವರ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಅನುಗೊಂಡನಹಳ್ಳಿ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಪರಿಶೀಲನೆ ನಡೆಸಿದ್ದು, ಒಬ್ಬ ವಿದ್ಯಾರ್ಥಿನಿಯ ಮೃತದೇಹ ಪತ್ತೆ ಮಾಡಿದ್ದಾರೆ. ಮತ್ತೊಬ್ಬ ವಿದ್ಯಾರ್ಥಿನಿಗಾಗಿ ಹುಡುಕಾಟ ನಡೆಸಲಾಗಿದೆ.