ಬೆಂಗಳೂರು: ರಾಜ್ಯದ 1.55 ಲಕ್ಷ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಉಚಿತವಾಗಿ ಟ್ಯಾಬ್ ವಿತರಿಸಲಾಗುತ್ತದೆ. ಪದವಿ, ಇಂಜಿನಿಯರಿಂಗ್ ಮತ್ತು ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಕಲಿಯುತ್ತಿರುವ 1.55 ಲಕ್ಷ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ 155.4 ಕೋಟಿ ರೂಪಾಯಿ ವೆಚ್ಚದಲ್ಲಿ ಉಚಿತವಾಗಿ ಟ್ಯಾಬ್ ವಿತರಿಸಲಿದೆ.
ಕಾಲೇಜ್ ಶಿಕ್ಷಣ ಇಲಾಖೆ ಆಯುಕ್ತ ಪ್ರದೀಪ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ವಾಜಪೇಯಿ ಜನ್ಮದಿನ ಅಂಗವಾಗಿ ರಾಜ್ಯ ಸರ್ಕಾರ ಶುಕ್ರವಾರ ಆಯೋಜಿಸಿದ್ದ ಉತ್ತಮ ಆಡಳಿತ ದಿನ ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣದಲ್ಲಿ ಜಾಗತಿಕ ಮಟ್ಟದ ವಿಚಾರಗೋಷ್ಠಿಯಲ್ಲಿ ಅವರು ಮಾತನಾಡಿ, ಪದವಿ, ಇಂಜಿನಿಯರಿಂಗ್ ಮತ್ತು ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ಉಚಿತವಾಗಿ ಟ್ಯಾಬ್ ನೀಡಲಾಗುವುದು. ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಟ್ಯಾಬ್ ಬದಲಿಗೆ ಹೆಚ್ಚಿನ ಸಾಮರ್ಥ್ಯ ಇರುವ ಲ್ಯಾಪ್ಟಾಪ್ ಖರೀದಿಗೆ ನೆರವು ನೀಡಲಾಗುತ್ತದೆ ಎಂದು ಹೇಳಿದ್ದಾರೆ.