ಬೆಂಗಳೂರು : ನೀಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಎಂಜಿನಿಯರಿಂಗ್ ಹೊರತುಪಡಿಸಿ ಬೇರೆ ವೃತ್ತಿಪರ ಕೋರ್ಸ್ ಗಳಿಗೆ ಪ್ರವೇಶ ಬಯಸಿರುವ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆಯನ್ನು ಜುಲೈ 24 ರಿಂದ ಆಗಸ್ಟ್ 1 ರವರೆಗೆ ನಡೆಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.
2023 ನೇ ಸಾಲಿನ ಯುಜಿ ನೀಟ್ ವೈದ್ಯಕೀಯ, ಆಯು ರ್ವೇದ, ದಂತ ವೈದ್ಯಕೀಯ, ನ್ಯಾಚುರೋಪತಿ ಮತ್ತು ಯೋಗ ಕೋರ್ಸುಗಳ ಪ್ರವೇಶಕ್ಕೆ ಅರ್ಹತೆ ಗಳಿಸಿರುವ ಅಭ್ಯರ್ಥಿಗಳ ದಾಖಲೆ ಪರಿಶೀಲನೆಗೆ ಕರ್ನಾ ಟಕ ಪರೀಕ್ಷಾ ಪ್ರಾಧಿಕಾರ ವೇಳಾಪಟ್ಟಿ ಪ್ರಕಟಿಸಿದ್ದು, ಜು.24ರಿಂದ ಆಗಸ್ಟ್ 1ರವರೆಗೆ ಮಲ್ಲೇಶ್ವರಂನಲ್ಲಿ ರುವ ಪ್ರಾಧಿಕಾರದ ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಯಲಿದೆ.
ಅಭ್ಯರ್ಥಿಗಳು ತಮ್ಮ ರ್ಯಾಂಕಿಂಗ್ ಗೆ ತಕ್ಕಂತೆ ನಿಗದಿಪಡಿಸಿರುವ ದಿನಾಂಕದಂದು ಹಾಜರಾಗಿ ದಾಖಲೆಗಳ ಪರಿಶೀಲನೆ ನಡೆಸಿಕೊಳ್ಳ ಬೇಕು. ಈಗಾಗಲೇ ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಪ್ರಾಧಿಕಾರ ನಡೆಸಿದ ಯುಜಿಸಿಇಟಿಯಲ್ಲಿ ರ್ಯಾಂಕಿಂಗ್ ಮೂಲಕ ಅರ್ಹತೆ ಪಡೆದು ದಾಖಲೆ ಪರಿಶೀಲನೆಗೆ ಹಾಜರಾಗಿರುವವರು ಈಗ ಯುಜಿ ನೀಟ್ ವೈದ್ಯ ಕೋರ್ಸುಗಳ ಪ್ರವೇಶಕ್ಕೆ ಮತ್ತೊಮ್ಮೆ ದಾಖಲೆ ಪರಿಶೀಲನೆಗೆ ಹಾಜರಾಗುವ ಅಗತ್ಯವಿಲ್ಲ.. ಹೆಚ್ಚಿನ ಮಾಹಿತಿಗೆ www.kea.kar.nic.in ವೀಕ್ಷಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.