ಉಡುಪಿ : ಇಂದು ಕ್ಯಾಮೆರಾ ಇಟ್ಟ ವಿದ್ಯಾರ್ಥಿಗಳು ನಾಳೆ ಬಾಂಬ್ ಕೊಟ್ಟರು ಇಡುತ್ತಾರೆ, ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಬಿಜೆಪಿ ಶಾಸಕ ಯಶ್ ಪಾಲ್ ಸುವರ್ಣ ಹೇಳಿದ್ದಾರೆ. ಉಡುಪಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಪ್ರಕರಣ ಸಂಬಂಧ ಪ್ರತಿಭಟನೆ ನಡೆಯುತ್ತಿದ್ದು , ಪ್ರತಿಭಟನೆ ಮೆರವಣಿಗೆ ವೇಳೆ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಉಡುಪಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಪ್ರಕರಣ ಸಂಬಂಧ ಪ್ರತಿಭಟನೆ ನಡೆಯುತ್ತಿದ್ದು , ಪ್ರತಿಭಟನೆ ಮೆರವಣಿಗೆ ವೇಳೆ ಬಿಜೆಪಿ ಶಾಸಕ ಯಶ್ ಪಾಲ್ ಸುವರ್ಣ ಮಾತನಾಡಿದ್ದಾರೆ. ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಪ್ರಕರಣವನ್ನು ಗೃಹ ಸಚಿವ ಡಾ. ಜಿ ಪರಮೇಶ್ವರ್ ಮಕ್ಕಳಾಟ ಎಂದಿದ್ದಕ್ಕೆ ಶಾಸಕ ಯಶ್ಪಾಲ್ ಸುವರ್ಣ ಕಿಡಿಕಾರಿದ್ದಾರೆ . ಜಿ. ಪರಮೇಶ್ವರ್ ಮಗ ಲಿಂಗ ಬದಲಾಯಿಸಿಕೊಂಡಿದ್ದು ಮಕ್ಕಳಾಟ. ಇಂದು ಕ್ಯಾಮೆರಾ ಇಟ್ಟ ವಿದ್ಯಾರ್ಥಿಗಳು ನಾಳೆ ಬಾಂಬ್ ಕೊಟ್ಟರು ಇಡುತ್ತಾರೆ. ಆದ್ದರಿಂದ ಈ ಬಗ್ಗೆ ತನಿಖೆಯಾಗಬೇಕು ಎಂದು ಒತ್ತಾಯ ಮಾಡಿದರು.
ಜಿ. ಪರಮೇಶ್ವರ್ ಮಗ ಲಿಂಗ ಬದಲಾಯಿಸಿದ್ದು ಮಕ್ಕಳಾಟನಾ.? ಎಂದು ಗೃಹ ಸಚಿವರ ವಿರುದ್ಧ ಹೇಳಿಕೆ ನೀಡಿದ್ದು, ಶಾಸಕರ ಹೇಳಿಕೆಗೆ ಕಾಂಗ್ರೆಸ್ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಶೌಚಾಲಯದಲ್ಲಿ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಘಟನೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಸಿಡಿದೆದ್ದಿದೆ. ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಬೆಂಗಳೂರಿನಲ್ಲಿ ಪ್ರತಿಭಟನೆ ತೀವ್ರಗೊಳಿಸಿದ್ದು, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದ ನೇತ್ರ ಜ್ಯೋತಿ ಕಾಲೇಜಿನ ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿದ್ಯಾರ್ಥಿಯೋರ್ವಳ ಖಾಸಗಿ ದೃಶ್ಯ ಚಿತ್ರೀಕರಣ ಮಾಡಿರುವ ಘಟನೆ ವಿರುದ್ಧ ಉಡುಪಿಯಲ್ಲಿ ಬಿಜೆಪಿ ಶಾಸಕರು, ಮಹಿಳಾ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ ಬೆಂಗಳೂರಿನ ಸದಾಶಿವನಗರದಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದರು, ಗೃಹ ಸಚಿವರು ಹಾಗೂ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ್ದಾರೆ.
ಸ್ನೇಹಿತರ ಮಧ್ಯೆ ಘಟನೆಗಳು ನಡೆಯುತ್ತದೆ, ನಂತರ ಅಲ್ಲಿಗೆ ಬಿಟ್ಟು ಹೋಗುತ್ತದೆ, ಸಣ್ಣ ಘಟನೆಗಳಿಗೆ ರಾಜಕೀಯ ಬಣ್ಣ ಬಳಿಯಬೇಡಿ ಎಂದು ಹೇಳಿದ್ದೆ, ನಾನು ಮಕ್ಕಳ ಆಟ ಅಂತ ಹೇಳಿಲ್ಲ ಎಂದು ಗೃಹ ಸಚಿವ ಜಿ ಪರಮೇಶ್ವರ್ ಸ್ಪಷ್ಟನೆ ನೀಡಿದ್ದರು. ಘಟನೆ ಕುರಿತು ಕ್ರಮ ಕೈಗೊಳ್ಳಲು ಕಾಲೇಜಿನ ಪ್ರಾಂಶುಪಾಲರು ಇದ್ದಾರೆ, ಅವರಿಗೆ ಬಿಡಬೇಕು. ಅಂತಹ ಘಟನೆ ನಡೆದಿದ್ದರೆ ಅವರು ನೋಡಿಕೊಳ್ಳುತ್ತಾರೆ. ಅವರು ಕಂಪ್ಲೆಂಟ್ ಕೊಡುತ್ತಾರೆ. ವಿದ್ಯಾರ್ಥಿನಿಯರ ತಂದೆ-ತಾಯಿಯನ್ನು ಕರೆಸಿ ಮಾತನಾಡುತ್ತಾರೆ, ಇದನ್ನು ದೊಡ್ಡ ಪ್ರಮಾಣಕ್ಕೆ ತೆಗೆದುಕೊಂಡು ಹೋಗಬೇಡಿ ಎಂದು ಹೇಳಿದ್ದೇನೆ ಎಂದು ಗೃಹ ಸಚಿವರು ಸ್ಪಷ್ಟನೆ ನೀಡಿದ್ದರು.