ಕೋಟಾ: ರಾಜಸ್ಥಾನದ ಕೋಟಾದಲ್ಲಿ ನೀಟ್ ಪರೀಕ್ಷೆಗೆ ಸಿದ್ಧತೆ ನಡೆಸಿದ್ದ ಮತ್ತೋರ್ವ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಮೂಲಕ ಕೋಟಾ ಕೋಚಿಂಗ್ ಸೆಂಟರ್ ನಲ್ಲಿ ಈ ವರ್ಷ ನಡೆದ 26ನೇ ಆತ್ಮಹತ್ಯೆ ಪ್ರಕರಣ ಇದಾಗಿದೆ.
ಇಂಜಿನಿಯರಿಂಗ್ ಮತ್ತು ವೈದ್ಯಕೀಯ ಪ್ರವೇಶ ಪರೀಕ್ಷೆಗೆ ತಯಾರಿ ನಡೆಸಲು ಪ್ರತಿ ವರ್ಷ ಲಕ್ಷಾಂತರ ವಿದ್ಯಾರ್ಥಿಗಳು ರಾಜಸ್ಥಾನದ ಕೋಟಾದ ಕೋಚಿಂಗ್ ಸೆಂಟರ್ ಗೆ ಬರುತ್ತಾರೆ. ಹೀಗೆ ಬಂದವರಲ್ಲಿ ಈ ವರ್ಷ ಬರೋಬ್ಬರಿ 26 ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗುರುವುದು ಆತಂಕಕ್ಕೆ ಕಾರಣವಾಗಿದೆ.
ಉತ್ತರ ಪ್ರದೆಶದ ಮಹಾರಾಜ್ ಗಂಜ್ ಮೂಲದ 20 ವರ್ಷದ ವಿದ್ಯಾರ್ಥಿಯೋರ್ವ ತಾನು ವಾಸವಾಗಿದ್ದ ರೂಮಿನ ಕೊಠಡಿಯಲ್ಲಿಯೇ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೊಹಮ್ಮದ್ ತನ್ವೀರ್ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ವಿದ್ಯಾರ್ಥಿ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.