alex Certify ಸಾವಿರಕ್ಕೂ ಅಧಿಕ ಸಿವಿಲ್ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿ: ಲಿಖಿತ ಪರೀಕ್ಷೆಗೆ ತರಬೇತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಾವಿರಕ್ಕೂ ಅಧಿಕ ಸಿವಿಲ್ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿ: ಲಿಖಿತ ಪರೀಕ್ಷೆಗೆ ತರಬೇತಿ

ಶಿವಮೊಗ್ಗ: ರಾಜ್ಯ ಸರ್ಕಾರವು ಮುಂದಿನ ದಿನಗಳಲ್ಲಿ ನಡೆಸಲಿರುವ ಪೊಲೀಸ್ ಇಲಾಖೆಯಲ್ಲಿನ ಸಾವಿರಕ್ಕೂ ಹೆಚ್ಚು ಸಿವಿಲ್ ಪೊಲೀಸ್ ಸಬ್ ಇನ್ಸ್‍ಪೆಕ್ಟರ್ ಹುದ್ದೆಗಳ ನೇಮಕಾತಿಯ ಲಿಖಿತ ಪರೀಕ್ಷೆಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ದ ವತಿಯಿಂದ ತರಬೇತಿ ನೀಡಲು ನಿರ್ಧರಿಸಲಾಗಿದೆ.

ಆಸಕ್ತರು ಸೆಪ್ಟೆಂಬರ್ 14 ರೊಳಗಾಗಿ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ‘ಮುಕ್ತಗಂಗೋತ್ರಿ’ ಆವರಣದಲ್ಲಿರುವ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕಚೇರಿಯಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯೊಳಗಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ ದೂ.ಸಂಖ್ಯೆ: 0821-2515944 / 9964760090 ನ್ನು ಸಂಪರ್ಕಿಸಬಹುದೆಂದು ಕರಾಮುವಿ ಕುಲಸಚಿವ ಪ್ರೊ. ಆರ್. ರಾಜಣ್ಣ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...