ಬೆಂಗಳೂರು : ಇನ್ಮುಂದೆ ಭಾನುವಾರವೂ ಸಬ್ ರಿಜಿಸ್ಟ್ರಾರ್ ಕಚೇರಿ ಓಪನ್ ಆಗಲಿದ್ದು, ಸಾರ್ವಜನಿಕರು ರಜಾ ದಿನದಲ್ಲಿ ಆಸ್ತಿ ನೋಂದಣಿ ಮಾಡಿಕೊಳ್ಳಬಹುದಾಗಿದೆ.
ಹೌದು. ರೊಟೇಷನ್ ಆಧಾರದಲ್ಲಿ ಭಾನುವಾರದಂದು ಪ್ರತಿ ಜಿಲ್ಲೆಯಲ್ಲಿ ಒಂದು ಉಪನೋಂದಣಾಧಿಕಾರಿಗಳ ಕಚೇರಿ ತೆರೆಯಲಿದೆ. ಮೊದಲಿಗೆ ಬೆಂಗಳೂರಿನಲ್ಲಿ ಈ ವ್ಯವಸ್ಥೆ ಜಾರಿ ಮಾಡುತ್ತಿದ್ದು, ಏಪ್ರಿಲ್ ನಿಂದ ಇತರೆ ನಗರಗಳಲ್ಲೂ ಆರಂಭಿಸುವ ಚಿಂತನೆ ಇದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ರೋಟೇಶನ್ ಆದರದಲ್ಲಿ ರಾಜ್ಯದ ಜನರು ಭಾನುವಾರವೂ ಕಂದಾಯ ಇಲಾಖೆ ಸೇವೆಗಳನ್ನು ಪಡೆದುಕೊಳ್ಳಬಹುದು. ಬೆಂಗಳೂರು ಸೇರಿ ಮಹಾನಗರ ಪಾಲಿಕೆ ವ್ಯಾಪ್ತಿಯ ನೋಂದಣಿ ಕಚೇರಿಗಳನ್ನು ಭಾನುವಾರವೂ ಕಾರ್ಯನಿರ್ವಹಿಸುವಂತೆ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದ್ದಾರೆ.