ಮೈಸೂರು: ಉಪತಹಶೀಲ್ದಾರ್ ಕಿರುಕುಳಕ್ಕೆ ಬೇಸತ್ತು ವಿಕಲಚೇತನ ಕಂಪ್ಯೂಟರ್ ಆಪರೇಟರ್ ಓರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಹುಲ್ಲಹಳ್ಳಿಯಲ್ಲಿ ನಡೆದಿದೆ.
ಹುಲ್ಲಹಳ್ಳಿ ನಾಡಕಚೇರಿಯ ಕಂಪ್ಯೂಟರ್ ಆಪರೇಟರ್ ಪರಮೇಶ್ ಆತ್ಮಹತ್ಯೆಗೆ ಶರಣಾದವರು. ಉಪತಹಶೀಲ್ದಾರ್ ಶಿವಕುಮಾರ್ ಪರಮೇಶ್ ಗೆ ಮಾನಸಿಕ ಕಿರುಕುಳ ನೀಡುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ.
ಶಿವಕುಮಾರ್ ಕಿರುಕುಳದಿಂದ ನೊಂದು ಡೆತ್ ನೋಟ್ ಬರೆದಿಟ್ಟು ವಿಷ ಸೇವಿಸಿದ್ದರು. ತಕ್ಷಣ ಅವರನ್ನು ಮೈಸೂರಿನ ಕೆ.ಆರ್. ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.