ರಾಮನಗರ : ರಾಮನಗರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಡಿ.ಕೆ ಸುರೇಶ್ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಭರ್ಜರಿ ರೋಡ್ ಶೋ ಮೂಲಕ ಆಗಮಿಸಿದ ಡಿಕೆ ಸುರೇಶ್ ರಾಮನಗರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.
ಇಂದಿನಿಂದ ನಾಮಪತ್ರ ಸಲ್ಲಿಕೆ ಶುರುವಾಗಿದ್ದು ಮೊದಲ ದಿನವೇ ಡಿಕೆ ಸುರೇಶ್ ನಾಪಮತ್ರ ಸಲ್ಲಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಬಿಜೆಪಿ – ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಹೃದಯ ತಜ್ಞ ಡಾ ಸಿಎನ್ ಮಂಜುನಾಥ್ ಅವರು ಸ್ಪರ್ಧೆಗಿಳಿದಿದ್ದಾರೆ.