ಬೆಂಗಳೂರು : ಸಿಎಂ ಸಿದ್ಧರಾಮಯ್ಯ ಮೈಸೂರಿನ ವರುಣಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿರುವುದನ್ನು ಅಸಿಂಧುಗೊಳಿಸಬೇಕೆಂದು ಕೋರಿ ಕರ್ನಾಟಕ ಹೈಕೋರ್ಟ್ ಗೆ ಅರ್ಜಿ ಸಲ್ಲಿಕೆಯಾಗಿದ್ದು, ಸೆ.13 ರೊಳಗೆ ಲಿಖಿತ ಹೇಳಿಕೆ ಸಲ್ಲಿಸುವಂತೆ ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್ ಸೂಚನೆ ನೀಡಿದೆ.
ಈ ಸಂಬಂಧ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಸೆಪ್ಟೆಂಬರ್ 13ಕ್ಕೆ ಮುಂದೂಡಿದ್ದು, ಅಷ್ಟರೊಳಗೆ ಲಿಖಿತ ಹೇಳಿಕೆ ನೀಡುವಂತೆ ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್ ಸೂಚನೆ ನೀಡಿದೆ . ಸಿಎಂ ಕೊಡುವ ಉತ್ತರದ ಮೇಲೆ ಹೈಕೋರ್ಟ್ ಮುಂದಿನ ವಿಚಾರಣೆ ನಡೆಸಲಿದೆ.
ಸಿಎಂ ಸಿದ್ದರಾಮಯ್ಯ ಚುನಾವಣೆಯಲ್ಲಿ ಮತದಾರರಿಗೆ ಆಮಿಷವೊಡ್ಡಿ ಅಕ್ರಮ ಎಸಗಿದ್ದಾರೆ. ಇದು ಲಂಚ ಮತ್ತು ಭ್ರಷ್ಟಚಾರಕ್ಕೆ ಸಮನವಾಗಿದೆ. ಚುನಾವಣಾ ನೀತಿ ಸಂಹಿತೆ ಸ್ಪಷ್ಟ ಉಲ್ಲಂಘನೆಯೂ ಆಗಿದೆ, ಆದ್ದರಿಂದ ಸಿಎಂ ಸಿದ್ಧರಾಮಯ್ಯ ಮೈಸೂರಿನ ವರುಣಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿರುವುದನ್ನು ಅಸಿಂಧುಗೊಳಿಸಬೇಕೆಂದು ಕೋರಿ ಅರ್ಜಿದಾರರು ಕರ್ನಾಟಕ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.