alex Certify ಹೆಲಿಕಾಪ್ಟರ್ ಪತನ: ದೇಶದ ಸುರಕ್ಷತೆ ದೃಷ್ಟಿಯಿಂದ ಗಂಭೀರ ಎಚ್ಚರಿಕೆ, ತನಿಖೆ ನಡೆಸಿ, ಪ್ರಧಾನಿ ಮಾಹಿತಿ ನೀಡಬೇಕು; ಸುಬ್ರಮಣಿಯನ್ ಸ್ವಾಮಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೆಲಿಕಾಪ್ಟರ್ ಪತನ: ದೇಶದ ಸುರಕ್ಷತೆ ದೃಷ್ಟಿಯಿಂದ ಗಂಭೀರ ಎಚ್ಚರಿಕೆ, ತನಿಖೆ ನಡೆಸಿ, ಪ್ರಧಾನಿ ಮಾಹಿತಿ ನೀಡಬೇಕು; ಸುಬ್ರಮಣಿಯನ್ ಸ್ವಾಮಿ

ತಮಿಳುನಾಡಿನ ಕೂನೂರಿನಲ್ಲಿ ನಡೆದ ಹೆಲಿಕಾಪ್ಟರ್ ದುರಂತದಲ್ಲಿ ಸಿಡಿಎಸ್ ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ ರಾವತ್ ಹಾಗೂ ಸೇನಾಧಿಕಾರಿಗಳು ಮೃತಪಟ್ಟಿದ್ದಾರೆ.

ಈ ಘಟನೆಯ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಒತ್ತಾಯಿಸಿದ್ದಾರೆ. ಸಾಮಾನ್ಯ ತನಿಖೆ ನಡೆಸುವುದರಿಂದ ಪ್ರಯೋಜನವಿಲ್ಲ. ಸುಪ್ರೀಂಕೋರ್ಟಿನ ಹಿರಿಯ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಉನ್ನತ ಮಟ್ಟದ ತನಿಖೆ ನಡೆಸಬೇಕು. ಅಲ್ಲದೆ, ಪ್ರಧಾನಿಗಳು ಘಟನೆಯ ಬಗ್ಗೆ ಜನಸಾಮಾನ್ಯರಿಗೆ ಸೂಕ್ತ ಮಾಹಿತಿ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ದೇಶದ ಸುರಕ್ಷತೆಯ ದೃಷ್ಟಿಯಿಂದ ಇದೊಂದು ಗಂಭೀರ ಎಚ್ಚರಿಕೆಯಾಗಿದ್ದು, ಇದರ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಯಬೇಕಿದೆ ಎಂದು ಸುಬ್ರಹ್ಮಣಿಯನ್ ಸ್ವಾಮಿ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...