ಬಳ್ಳಾರಿ : ಪ್ರವಾಸೋದ್ಯಮ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ಎಸ್ಸಿಎಸ್ಪಿ, ಟಿಎಸ್ಪಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಒಂದು ತಿಂಗಳ ಉದ್ಯಮಶೀಲತೆ ತರಬೇತಿ ಹಾಗೂ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟಿನ್ ನಡೆಸಲು ಸಹಾಯಧನ ನೀಡಲು ಜಿಲ್ಲೆಗೆ ನಿಗಧಿಪಡಿಸಿದ ಗುರಿಯಂತೆ ಆರ್ಜಿ ಆಹ್ವಾನಿಸಿ, ತಾತ್ಕಾಲಿಕ ಆಯ್ಕೆ ಪಟ್ಟಿ ಸಿದ್ದಪಡಿಸಲಾಗಿದ್ದು, ಆಕ್ಷೇಪಣೆಗಳೆನಾದರೂ ಇದ್ದಲ್ಲಿ ಸಲ್ಲಿಸಬಹುದು ಎಂದು ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಹೊಸಪೇಟೆಯ ಕಮಲಾಪುರದ ಲೋಟಸ್ ಮಹಲ್ ಹತ್ತಿರದ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರ ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.ಈ ಬಗ್ಗೆ ಆಕ್ಷೇಪಣೆಗಳು ಏನಾದರು ಇದ್ದಲ್ಲಿ ಮಾ.03 ರೊಳಗಾಗಿ ಇದೇ ಕಚೇರಿಗೆ ಸಲ್ಲಿಸಬೇಕು. ಅವಧಿ ಮೀರಿ ಬಂದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ.ಹೆಚ್ಚಿನ ಮಾಹಿತಿಗಾಗಿ ದೂ.08394-295640 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.