ಗುಜರಾತ್‌ನ ವಲ್ಸಾದ್‌ನಲ್ಲಿ ಮಗನ ಹುಟ್ಟುಹಬ್ಬವನ್ನು ಆನಂದಿಸುತ್ತಿದ್ದ ಮಹಿಳೆಯೊಬ್ಬರು ಹಠಾತ್ ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಂಡು ನೆಟ್ಟಿಗರಿಗೆ ಶಾಕ್ ನೀಡಿದೆ. ಈ ಘಟನೆಯಿಂದ ಮಗುವಿನ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ ಕುಟುಂಬದಲ್ಲಿ ಶೋಕ ಮಡುಗಟ್ಟಿದೆ.
ದೇಶದಾದ್ಯಂತ ಯುವಕರಲ್ಲೇ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣಗಳ ಮಧ್ಯೆ ಯಾಮಿನಿಬೆನ್ ಎಂದು ಗುರುತಿಸಲಾದ ಮಹಿಳೆಯ ಸಾವು ಮತ್ತಷ್ಟು ಆತಂಕ ಹೆಚ್ಚಿಸಿದೆ. ತನ್ನ 5 ವರ್ಷದ ಮಗನ ಹುಟ್ಟುಹಬ್ಬವನ್ನು ಕುಟುಂಬ ಮತ್ತು ಸ್ನೇಹಿತರೊಂದಿಗೆ ಆಚರಿಸುತ್ತಿದ್ದ ಆಕೆ ಸಂಭ್ರಮದಲ್ಲಿದ್ದ ವೇಳೆಯೇ ಸಾವಿನ ಮನೆ ಸೇರಿದ್ದಾರೆ.
ಹುಟ್ಟುಹಬ್ಬದ ಸಂಭ್ರಮಾಚರಣೆಯಲ್ಲಿ ನೆರೆದಿದ್ದವರು ಡಿಜೆ ಸಂಗೀತಕ್ಕೆ ನೃತ್ಯ ಮಾಡುತ್ತಿದ್ದಾರೆ. ಮಹಿಳೆ ತನ್ನ ಪತಿ ಮತ್ತು ಮಗನೊಂದಿಗೆ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದರು. ಇದ್ದಕ್ಕಿದ್ದಂತೆ ಮಹಿಳೆ ವೇದಿಕೆ ಮೇಲೆ ಕುಸಿದು ಬಿದ್ದರು. ಕೂಡಲೇ ಆಕೆಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಆಕೆ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ.