ಬೆಂಗಳೂರು: ಸ್ಯಾಂಡಲ್ವುಡ್ ಸ್ಟಾರ್ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬದ ಹಿನ್ನಲೆಯಲ್ಲಿ ಇಂದು ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ.
ರಾತ್ರಿಯಿಂದಲೇ ಅಭಿಮಾನಿಗಳು ಸಂಭ್ರಮಾಚರಣೆ ಕೈಗೊಂಡಿದ್ದಾರೆ. ಅಭಿಮಾನಿಗಳು ಮನೆಯ ಬಳಿ ಬಂದು ತೊಂದರೆ ಅನುಭವಿಸಬಾರದು ಎಂಬ ಕಾರಣಕ್ಕೆ ಬೆಂಗಳೂರಿನ ಜಯನಗರದ ಎಂಇಎಸ್ ಮೈದಾನದಲ್ಲಿ ಬೆಳಗ್ಗೆ ಸುದೀಪ್ ಹುಟ್ಟುಹಬ್ಬ ಆಚರಿಸಿಕೊಳ್ಳಲಿದ್ದಾರೆ.
ಅಪಾರ ಅಭಿಮಾನಿಗಳ ಸಮ್ಮುಖದಲ್ಲಿ ಸುದೀಪ್ ಹುಟ್ಟುಹಬ್ಬದ ಸಂಭ್ರಮಾಚರಣೆ ನಡೆಯಲಿದ್ದು, ಮೈದಾನದಲ್ಲಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಇನ್ನು ರಾಜ್ಯದ ವಿವಿಧೆಡೆ ಅಭಿಮಾನಿಗಳು ನೆಚ್ಚಿನ ನಟನ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ವಿವಿಧ ಸಾಮಾಜಿಕ ಕಾರ್ಯ ಕೈಗೊಂಡಿದ್ದಾರೆ.
ಇನ್ನು ವರ್ಷಕ್ಕೆ ಎರಡು ಮೂರು ಸಿನಿಮಾ ಮಾಡಬೇಕೆನ್ನುವುದು ನನ್ನ ಆಸೆ. ಆದರೆ ಕಾರಣಾಂತರಗಳಿಂದ ವಿಳಂಬವಾಗುತ್ತದೆ. ‘ಮ್ಯಾಕ್ಸ್’ ಶೀಘ್ರ ಬಿಡುಗಡೆಯಾಗಲಿದೆ ಎಂದು ಸುದೀಪ್ ಹೇಳಿದ್ದಾರೆ.