
ಬೆಂಗಳೂರು: ರಾಜ್ಯದ ವಿಭಾಗಿಯ ಕೇಂದ್ರಗಳಲ್ಲಿ ಜಯದೇವ ಆಸ್ಪತ್ರೆ ಘಟಕಗಳನ್ನು ಪ್ರಾರಂಭಿಸುವ ಯೋಜನೆ ಇದೆ. ಮುಂದೆ ಯೋಜನೆ ಜಾರಿಗೆ ಬರುವ ನಿರೀಕ್ಷೆ ಇದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಇನ್ಫೋಸಿಸ್ ಫೌಂಡೇಶನ್ ನಿಂದ ಜಯದೇವ ಆಸ್ಪತ್ರೆಯಲ್ಲಿ ನಿರ್ಮಾಣಗೊಂಡಿರುವ ನೂತನ ಆಸ್ಪತ್ರೆ ಉದ್ಘಾಟನೆ ಸಮಾರಂಭದಲ್ಲಿ ಸಿಎಂ ಮಾತನಾಡಿ, ರಾಜ್ಯದ ವಿಭಾಗೀಯ ಕೇಂದ್ರಗಳಲ್ಲಿ ಜಯದೇವ ಘಟಕಗಳನ್ನು ನಿರ್ಮಾಣ ಮಾಡಲಾಗುವುದು ಎಂದರು. ಇದೇ ವೇಳೆ ಆಡೋಗ್ಯ ಸಚಿವ ಡಾ.ಕೆ. ಸುಧಾಕರ್ ಅವರನ್ನು ಸಿಎಂ ಹಾಡಿಹೊಗಳಿದ್ದಾರೆ. ಸುಧಾಕರ್ ಒಬ್ಬ ಡೈನಾಮಿಕ್ ಮಿನಿಸ್ಟರ್. ಕೋವಿಡ್ ಟೈಮ್ ನಲ್ಲಿ ಸುಧಾಕರ್ ಒಳ್ಳೆಯ ಕೆಲಸ ಮಾಡಿದ್ದಾರೆ ಎಂದು ಸಿಎಂ ಮೆಚ್ಚುಗೆ ಮಾತುಗಳನ್ನಾಡಿದ್ದಾರೆ.