ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ತೀವ್ರವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶಾಲೆಗಳನ್ನು ಬಂದ್ ಮಾಡುವ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸುವುದಾಗಿ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ಸಾವಿರದ ಗಡಿ ದಾಟಿದೆ. ಜನಸಾಮಾನ್ಯರು ನಿಯಮಗಳನ್ನು ಪಾಲಿಸದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಎಚ್ಚರಿಸಿದ್ದಾರೆ.
ಜನ ನಿಯಮ ಪಾಲಿಸಬೇಕು. ಸರ್ಕಾರ ಮತ್ತು ಆರೋಗ್ಯ ಇಲಾಖೆಯಿಂದ ಲಸಿಕೆ ನೀಡಲಾಗುತ್ತಿದೆ. ಜನ ಎಚ್ಚೆತ್ತುಕೊಳ್ಳದಿದ್ದರೆ ಎರಡನೆಯ ಅಲೆ ಇನ್ನಷ್ಟು ಏರಿಕೆಯಾಗಲಿದೆ ಎಂದು ತಾಂತ್ರಿಕ ಸಲಹಾ ಸಮಿತಿ ಸಲಹೆ ನೀಡಿದೆ. ಶಾಲೆಗಳಿಗೆ ರಜೆ ನೀಡುವ ಬಗ್ಗೆ ಸಿಎಂ ಜೊತೆ ಚರ್ಚೆ ನಡೆಸುವುದಾಗಿ ಅವರು ಹೇಳಿದ್ದಾರೆ.