ಬೆಂಗಳೂರು: ರಾಜ್ಯದಲ್ಲಿ ನಿನ್ನೆಗಿಂತ ಇವತ್ತು ಕೊರೋನಾ ಪ್ರಕರಣ ಕಡಿಮೆಯಾಗಿದೆ. ರಾಜ್ಯದಲ್ಲಿ ಇಂದು 1,157 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 2,188 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ರಾಜ್ಯದಲ್ಲಿ ಇದುವರೆಗೆ 8,25,141 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಚೇತರಿಕೆ ದರ ಶೇಕಡ 95.63 ರಷ್ಟು ಇದೆ. ರಾಜ್ಯದ 24 ಜಿಲ್ಲೆಗಳಲ್ಲಿ ಇಂದು ಶೂನ್ಯ ಮರಣ ದಾಖಲಾಗಿದ್ದು, ಕೋವಿಡ್ ಮರಣ ಪ್ರಮಾಣ ಶೇಕಡ 1.33 ರಷ್ಟು ಇದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಮಾಹಿತಿ ನೀಡಿದ್ದಾರೆ.
ರಾಜ್ಯದಲ್ಲಿ ನಿನ್ನೆ 5 ತಿಂಗಳಲ್ಲೇ ಅತ್ಯಂತ ಕನಿಷ್ಠ ಪ್ರಕರಣ 1565 ಕೇಸ್ ಪತ್ತೆಯಾಗಿದ್ದು, ಇಂದು 1157 ಕೇಸ್ ಪತ್ತೆಯಾಗಿವೆ.