ಬೆಂಗಳೂರು: 18 ವರ್ಷ ಮೇಲ್ಪಟ್ಟವರಿಗೆ ಮೇ 1 ರಿಂದ ಉಚಿತವಾಗಿ ಲಸಿಕೆ ನೀಡಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 18 ರಿಂದ 45 ವರ್ಷದವರಿಗೆ ಉಚಿತವಾಗಿ ಲಸಿಕೆ ನೀಡಲಾಗುವುದು. ಉಚಿತವಾಗಿ ಲಸಿಕೆ ನೀಡಲು 400 ಕೋಟಿ ರುಪಾಯಿ ಮೀಸಲಿಡಲಾಗಿದೆ ಎಂದು ತಿಳಿಸಿದ್ದಾರೆ.
ಕೊರೊನಾ ಸೋಂಕು ತಡೆಗೆ ಲಸಿಕೆ ರಾಮಬಾಣವಾಗಿದೆ. ಸೋಂಕು ತಡೆಗೆ ಆದಷ್ಟು ಬೇಗನೆ ಲಸಿಕೆ ನೀಡಲು ಸಂಪುಟ ಸಭೆಯಲ್ಲಿ ಒಮ್ಮತದ ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.